Udupi: ಜಿಲ್ಲೆಯಲ್ಲಿ ಕ್ಯಾಮರಾ ಕಣ್ಗಾವಲು; ಶ್ಯೇನಾ ದೃಷ್ಟಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ (Video)
14/08/2025
ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಅಪರಾಧ ಕೃತ್ಯಕ್ಕೆ ಕಡಿವಾಣ ಹಾಕಲು ಸುರಕ್ಷತೆಯ ದೃಷ್ಟಿಯಿಂದ ನಗರದೆಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ.
ಉಡುಪಿ ಜಿಲ್ಲೆಯಾದ್ಯಂತ ಸಿಸಿ ಕ್ಯಾಮರಾ ಅಳವಡಿಸುವ ‘ಶ್ಯೇನ ದೃಷ್ಟಿ’ ಎಂಬ ನೂತನ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ. ರಾಜ್ಯದಲ್ಲೇ ಮೊದಲ ಬಾರಿಗೆ ಉಡುಪಿ ಜಿಲ್ಲೆಯಲ್ಲಿ ಈ ಕಾರ್ಯಕ್ರಮವನ್ನು ಜಾರಿಗೆ ತರಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಹಾಗೂ ಉಡುಪಿ ಚೇಂಬರ‍್ ಆಫ್ ಕಾಮರ್ಸ್ ಆ್ಯಂಡ್ ಇಂಡಸ್ಟ್ರೀ ಇವರ ಸಹಭಾಗಿತ್ವದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಚಿವೆ ಹೆಬ್ಬಾಳ್ಕರ್, ಉಡುಪಿ ಜಿಲ್ಲೆಯ 207 ಜಂಕ್ಷನ್‌ಗಳಲ್ಲಿ ಸಿಸಿ ಕ್ಯಾಮರಾಗಳನ್ನು ಅಳವಡಿಸಿದ್ದು, 621 ಸಿಸಿ ಕ್ಯಾಮರಾಗಳು ಜಿಲ್ಲೆಯ ಸುರಕ್ಷತೆಗಾಗಿ ಹದ್ದಿನ ಕಣ್ಣಿಟ್ಟಿದೆ. ಅಲ್ಲದೇ 10 ಕಡೆ ಗಡಿ ರಸ್ತೆಗಳಲ್ಲಿ ಸ್ವಯಂಚಾಲಿತ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಎಸ್ಪಿ ಹರಿರಾಂ ಶಂಕರ್ ಅವರ ಮುತುವರ್ಜಿಯಲ್ಲಿ ಉಡುಪಿ ಜಿಲ್ಲೆಯಲ್ಲಿ ಮೊದಲು ಹಮ್ಮಿಕೊಂಡ ಕಾರ್ಯಕ್ರಮ ಇಡೀ ರಾಜ್ಯಕ್ಕೆ ಮಾದರಿಯಾಗಲಿದೆ ಎಂದರು. ಈ ವೇಳೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಂ ಶಂಕರ್, ಜಿಲ್ಲಾಧಿಕಾರಿ ಸ್ವರೂಪ ಮೊದಲಾದವರು ಇದ್ದರು.