Udupi: ನಕಲಿ ಚಿನ್ನ ಅಡವಿಡುವ ಜಾಲ; ಚಿನ್ನ ಬೆಳ್ಳಿ ಕೆಲಸಗಾರರಿಂದ ಎಸ್ಪಿಗೆ ದೂರು
12/08/2025
ಉಡುಪಿಯ ಬ್ಯಾಂಕ್, ಫೈನಾನ್ಸ್ ಹಾಗೂ ಸಹಕಾರಿ ಸೊಸೈಟಿಗಳಲ್ಲಿ ನಕಲಿ ಚಿನ್ನ ಅಡವಿಡುವ ಜಾಲವೊಂದು ಕಾರ್ಯಾಚರಿಸುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹರಿರಾಂ ಶಂಕರ್ ಅವರಿಗೆ ಉಡುಪಿ ಜಿಲ್ಲಾ ಚಿನ್ನ ಬೆಳ್ಳಿ ಕೆಲಸಗಾರರ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.
ನಕಲಿ ಆಭರಣಗಳನ್ನು ಹಣಕಾಸು ಸಂಸ್ಥೆಗಳಲ್ಲಿ ಗಿರವಿ ಇಡುವುದರಿಂದಾಗಿ ಜಿಲ್ಲೆಯ ಚಿನ್ನ ಬೆಳ್ಳಿ ಕೆಲಸಗಾರರಿಗೆ ತೊಂದರೆಯಾಗುತ್ತಿದೆ. ಈ ಬಗ್ಗೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸಂಘದ ಸದಸ್ಯರು ಮನವಿ ಮಾಡಿದರು. ಸಂಘದ ಅಧ್ಯಕ್ಷ ರವಿಚಂದ್ರ ಆಚಾರ್ಯ ಮಾರಾಳಿ, ಗೌರವಾಧ್ಯಕ್ಷ ಬಾಲಕೃಷ್ಣ ಆಚಾರ್ಯ, ಕಾರ್ಯದರ್ಶಿ ರಘುನಾಥ ಆಚಾರ್ಯ ಮೊದಲಾದವರು ಇದ್ದರು.