
Udupi: ಭಾರೀ ಮಳೆ ಹಿನ್ನೆಲೆ; ಪ್ರಾಥಮಿಕ, ಪ್ರೌಢ, ಪದವಿಪೂರ್ವ ಕಾಲೇಜು ಗಳಿಗೆ ರಜೆ ಘೋಷಣೆ
18/08/2025
ಉಡುಪಿ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಆಗಸ್ಟ್ 18ರಂದು ಎಲ್ಲಾ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ.
ಕಳೆದ 2 ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಉಡುಪಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 18ರಂದು ಎಲ್ಲಾ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಮತ್ತು ಐಟಿಐ ಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಅದೇಶಿಸಿದ್ದಾರೆ. ಭಾರೀ ಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಮೀನುಗಾರರು ಹಾಗೂ ನದಿ ಪಾತ್ರದ ಜನರಿಗೆ ಕಡಲಿಗೆ ಇಳಿಯದಂತೆ ಜಿಲ್ಲಾಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ