
Udupi: ವಾರಾಹಿ ನದಿ ನೀರು ಸರಬರಾಜು ಕುರಿತು ಅಧಿಕಾರಿಗಳ ಸಭೆ
09/08/2025
ಉಡುಪಿ ನಗರಕ್ಕೆ ನಿರಂತರ ನೀರು ಸರಬರಾಜು ಮಾಡುವ ಯೋಜನೆಯಲ್ಲಿ ಭರತ್ ಕಲ್ ಜಾಕ್ ವೆಲ್‌ನಿಂದ ಹಾಲಾಡಿ ನೀರು ಶುದ್ದೀಕರಣ ಘಟಕದ ವರೆಗೂ ಮುಖ್ಯ ಕೊಳವೆ ಮಾರ್ಗ ಆಳವಡಿಸುವ ಬಗ್ಗೆ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಿತು.
ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಕೊಳವೆ ಮಾರ್ಗ ಅಳವಡಿಕೆ ಪ್ರಕ್ರಿಯೆಯ ಸಮಸ್ಯೆಗಳ ಬಗ್ಗೆ ಪರಿಹಾರ ಒದಗಿಸುವ ಬಗ್ಗೆ ಚರ್ಚೆ ನಡೆಸಿ ಕಾಮಗಾರಿಯನ್ನು ಅತೀ ಶೀಘ್ರದಲ್ಲಿ ಪೂರ್ಣಗೊಳಿಸಲು ವಿಶೇಷ ಆದ್ಯತೆ ನೀಡಬೇಕು ಎಂದರು. ಉಡುಪಿ ನಗರಕ್ಕೆ ನಿರಂತರ ನೀರು ಸರಬರಾಜಿಗೆ ಅವಕಾಶ ನೀಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಕುಂದಾಪುರ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ., ಜಿಲ್ಲಾ ಅರಣ್ಯಾಧಿಕಾರಿ ಗಣಪತಿ, ಉಡುಪಿ ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ವಾರಾಹಿ ಯೋಜನೆಯ ಅಧಿಕಾರಿಗಳು ಉಪಸ್ಥಿತರಿದ್ದರು.