
Udupi: ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಅಪರಿಚಿತ ವ್ಯಕ್ತಿ ಸಾವು
19/08/2025
ಉಡುಪಿಯ ಸಿಟಿ ಬಸ್ಸು ನಿಲ್ದಾಣದ ಸಮೀಪ ಕುಸಿದು ಬಿದ್ದು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ವ್ಯಕ್ತಿಯೊಬ್ಬರನ್ನು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಉಡುಪಿಯ ಅಜ್ಜರಕಾಡು ಆಸ್ಪತ್ರೆಗೆ ದಾಖಲಿಸಿದ್ದು, ವ್ಯಕ್ತಿಯು ಚಿಕಿತ್ಸೆಗೆ ಸ್ಪಂಧಿಸದೇ ಮೃತಪಟ್ಟಿದ್ದಾರೆ.
ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸಮಾಜಸೇವಕ ನಿತ್ಯಾನಂದ ಒಳಕಾಡು ಅವರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂಧಿಸದೇ ಆ ವ್ಯಕ್ತಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಅಜ್ಜರಕಾಡು ಶವಾಗಾರದಲ್ಲಿ ಇರಿಸಲಾಗಿದೆ. ವ್ಯಕ್ತಿಯ ಗುರುತು, ವಿಳಾಸ ಪತ್ತೆಯಾಗಿಲ್ಲ. ವ್ಯಕ್ತಿ ವಲಸೆ ಕಾರ್ಮಿಕನಿರಬೇಕೆಂದು ಅಂದಾಜಿಸಲಾಗಿದೆ.
ಯಾರಾದರೂ ವಾರೀಸುದಾರರಿದ್ದಲ್ಲಿ ಉಡುಪಿ ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರವನ್ನು ಅಥವಾ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸಲು ಸೂಚಿಸಲಾಗಿದೆ.