Udupi: ಆರ್‌ಎಸ್‌ಎಸ್ ಮುಖಂಡನ ಅವಹೇಳನ; ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪ್ರಕರಣ
19/08/2025
ಆರ್‌ಎಸ್‌ಎಸ್ ಮುಖಂಡ ಬಿ.ಎಲ್ ಸಂತೋಷ್ ವಿರುದ್ಧ ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆಗಸ್ಟ್ 16ರಂದು ಮಹೇಶ್ ಶೆಟ್ಟಿ ತಿಮರೋಡಿ ಅವರು ಸಾಮಾಜಿಕ ಜಾಲತಾಣದಲ್ಲಿ ಬಿ.ಎಲ್ ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಉಡುಪಿ ಗ್ರಾಮಾಂತರ ಮಂಡಳಿ ಅಧ್ಯಕ್ಷ ರಾಜೀವ ಕುಲಾಲ್ ಅವರು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬ್ರಹ್ಮಾವರ ಠಾಣೆಗೆ ದೂರು ನೀಡಿದ್ದಾರೆ.