
Udupi: ಧರ್ಮಸ್ಥಳ ಅಪಪ್ರಚಾರಕ್ಕೆ ವಿದೇಶೀ ಹಣ; ಅಮಿತ್ ಶಾ ಗೆ ಶ್ರೀನಿವಾಸ ಪೂಜಾರಿ ಪತ್ರ
19/08/2025
ಧರ್ಮಸ್ಥಳದ ವಿರುದ್ದ ಷಡ್ಯಂತ್ರಕ್ಕೆ ಯೂಟ್ಯೂಬರ್ಸ್ ಸಹಿತ ಅನೇಕರಿಗೆ ವಿದೇಶದಿಂದ ಹಣ ಬಂದಿರುವ ಆರೋಪವಿದ್ದು, ಈ ಹಿನ್ನಲೆಯಲ್ಲಿ ಇಡಿ ತನಿಖೆಗೆ ನಡೆಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಪತ್ರ ಬರೆದಿದ್ದಾರೆ.
ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರಗಳಿಗೆ ಯೂಟ್ಯೂಬರ್ಸ್ ಸಹಿತ ಅನೇಕರಿಗೆ ವಿದೇಶಿ ಹಣ ಬಂದಿರುವ ಆರೋಪಗಳಿವೆ. ರಾಜ್ಯದ ಪ್ರತಿಷ್ಠಿತ ಮಾಧ್ಯಮಗಳೂ ಈ ಬಗ್ಗೆ ವರದಿ ಮಾಡಿದ್ದವು. ಈ ಹಿನ್ನೆಲೆಯಲ್ಲಿ ಇದರ ಸತ್ಯಾಸತ್ಯತೆಯನ್ನು ತಿಳಿಯಲು ಕೂಡಲೇ ಇಡಿ ತನಿಖೆಗೆ ಆದೇಶಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಮನವಿ ಮಾಡಿರುವುದಾಗಿ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಶ್ರೀ ಕ್ಷೇತ್ರದ ವಿರುದ್ಧ ಷಡ್ಯಂತ್ರವಿದೆ ಎಂಬುದನ್ನು ಸ್ವತಃ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇದರ ಹಿಂದೆ ಎಡಪಂಥೀಯರ ಒತ್ತಡ ಇದೆ ಎಂಬುದನ್ನು ಸಚಿವ ದಿನೇಶ್ ಗುಂಡೂರಾವ್ ಅವರು ಹೇಳಿರುವುದು ಗಮನಾರ್ಹ. ಹೀಗಾಗಿ ಇಡಿ ತನಿಖೆ ನಡೆಸಿ ಸತ್ಯ ಹೊರಗೆ ಬರಲಿ, ತಪ್ಪಿತಸ್ಥರಿಗೆ ಶಿಕ್ಷೆ ಆಗಲಿ ಎಂದು ಆಗ್ರಹಿಸಿದರು.