
Udupi: ತಾಮ್ರದ ಪೈಪ್ ಕಳ್ಳತನ ಪ್ರಕರಣ; ಆರೋಪಿಗಳ ಬಂಧನ
13/08/2025
ಅಜ್ಜರಕಾಡುವಿನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ಸರ್ಕಾರಿ ಆಸ್ಪತ್ರೆಗೆ ಆಕ್ಸಿಜನ್ ಪೈಪ್‌ಲೈನ್ ಅಳವಡಿಸಲು ತಂದಿಟ್ಟಿದ್ದ ತಾಮ್ರದ ಪೈಪ್‌ಗಳನ್ನು ಕಳವುಗೈದ ಆರೋಪಿಗಳನ್ನು ಉಡುಪಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಿನ ವಿದ್ಯಾನಗರ ನಿವಾಸಿ ಮಹಮ್ಮದ್ ಜಾವೀದ್ ಹಾಗೂ ತುಮಕೂರು ಜಿಲ್ಲೆಯ ಶಿರಾ ಗ್ರಾಮದ ಸಯ್ಯದ್ ದಾದಾ ಪಿರ್ ಬಂಧಿತ ಆರೋಪಿಗಳು. ಅಜ್ಜರಕಾಡಿನಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತ ಆಸ್ಪತ್ರೆಯ ಆಕ್ಸಿಜನ್ ಘಟಕಕ್ಕೆ ಪೈಪ್‌ಲೈನ್ ಅಳವಡಿಸಲು ತಾಮ್ರದ ಪೈಪ್‌ಗಳು, ಫಿಟ್ಟಿಂಗ್ಸ್ ಹಾಗೂ ಹಳೆ ಕಾಪರ್ ಸ್ಟಿçಪ್‌ಗಳನ್ನು ಸ್ಟೋರ್ ರೂಮ್‌ನಲ್ಲಿ ಇರಿಸಲಾಗಿತ್ತು. ಆರೋಪಿಗಳು ಜುಲೈ 20ರಂದು ಸುಮಾರು 8 ಲಕ್ಷ ಮೌಲ್ಯದ ತಾಮ್ರದ ಸೊತ್ತುಗಳನ್ನು ಕಾರಿನಲ್ಲಿ ತುಂಬಿಕೊ0ಡು ಕಳವು ಮಾಡಿದ್ದರು. ಈ ಬಗ್ಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಉಡುಪಿ ನಗರ ಠಾಣಾ ಪೊಲೀಸ್ ನಿರೀಕ್ಷಕ ಮಂಜುನಾಥ ಬಡಿಗೇರ ನೇತೃತ್ವದ ತಂಡ ಆರೋಪಿಗಳನ್ನು ಶಿವಮೊಗ್ಗದಲ್ಲಿ ಬಂಧಿಸಿದ್ದಾರೆ. ಬಂಧಿತರಿ0ದ 2,81,000 ಮೌಲ್ಯದ ತಾಮ್ರದ ಪೈಪ್ ತುಂಡುಗಳು, ಕೃತ್ಯಕ್ಕೆ ಬಳಸಿದ ಮಾರುತಿ ಸ್ವಿಫ್ಟ್ ಕಾರನ್ನು ವಶಕ್ಕೆ ಪಡೆಯಲಾಗಿದೆ.