
Udupi: ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮ; 48ನೇ ಉಪನ್ಯಾಸ
18/08/2025
ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಆಶ್ರಯದಲ್ಲಿ ವಿವೇಕವಾಣಿ ಸರಣಿ ಉಪನ್ಯಾಸ ಕಾರ್ಯಕ್ರಮವು ಅಜ್ಜರಕಾಡು ಡಾ. ಜಿ. ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ನಡೆಯಿತು.
ನಲ್ವತೆಂಟನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಲೇಖಕ ಮತ್ತು ಮೈಸೂರಿನ ವಿವೇಕವಂಶಿ ಫೌಂಡೇಶನ್‌ನ ಸ್ಥಾಪಕ ನಿತ್ಯಾನಂದ ಎಸ್ ಬಿ ಅವರು ಆತ್ಮವಿಕಾಸದಿಂದ ರಾಷ್ಟ್ರವಿಕಾಸ - ವಿವೇಕಾನಂದರ ದಾರಿದೀಪ ಎಂಬ ವಿಷಯದ ಕುರಿತು ಮಾತನಾಡಿದರು. ವಿವೇಕಾನಂದರ ಆದರ್ಶಗಳು ನಮ್ಮನ್ನು ಶಕ್ತಿ, ಶ್ರದ್ಧೆ ಮತ್ತು ಸೇವೆ ಎಂಬ ಮೂರು ಮುಖ್ಯ ದಿಕ್ಕುಗಳಲ್ಲಿ ನಡೆಸುತ್ತದೆ ಎಂದು ಅಭಿಪ್ರಾಯಪಟ್ಟರು. ಈ ಸಂದರ್ಭದಲ್ಲಿ, ಕಾಲೇಜಿನ ಪ್ರಾಂಶುಪಾಲ ಸೋಜನ್ ಕೆ.ಜಿ. ಉಪಸ್ಥಿತರಿದ್ದರು.
ಮಂಗಳೂರು ವಿಶ್ವವಿದ್ಯಾಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕ ಡಾ. ಚಂದ್ರು ಹೆಗ್ಡೆ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಾಪಾಲನಾಧಿಕಾರಿ ಡಾ. ನಿಕೇತನ ವಂದಿಸಿದರು. ರಾಜ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ರಾಜೇಂದ್ರ ಕಾರ್ಯಕ್ರಮ ನಿರೂಪಿಸಿದರು.