
Udyavara: ಸಹಕಾರ ವರ್ಷಾಚರಣೆ ಅಂಗವಾಗಿ ಗಿಡ ನೆಡುವ ಸಂಕಲ್ಪ ಕಾರ್ಯಕ್ರಮ
14/08/2025
ಅಂತಾರಾಷ್ಟ್ರೀಯ ಸಹಕಾರ ವರ್ಷಾಚರಣೆ ಅಂಗವಾಗಿ "ಸಹಕಾರ ಸಂಸ್ಥೆಗಳು ಉತ್ತಮ ಜಗತ್ತನ್ನು ನಿರ್ಮಿಸಬಲ್ಲವು" ಎಂಬ ಧ್ಯೇಯ ವಾಕ್ಯದೊಂದಿಗೆ ಬೆಂಗಳೂರು ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಲ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಹಾಗೂ ಸಹಕಾರ ಇಲಾಖೆ ಇವರ ಸಹಯೋಗದೊಂದಿಗೆ "ಏಕ್ ಪೇಡ್ ಮಾಂ ಕೆ ನಾಮ್" ಗಿಡ ನೆಡುವ ಸಂಕಲ್ಪ ಹಸಿರು ಪರಿಸರ ನಿರ್ಮಿಸುವ ಕಾಯಕಲ್ಪ ಎಂಬ ಕಾರ್ಯಕ್ರಮವನ್ನು ಉದ್ಯಾವರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಸಲಾಯಿತು.
ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ-ಅಪರೇಟಿವ್ ಸೊಸೈಟಿಯ ಅಧ್ಯಕ್ಷ ಲೂವಿಸ್ ಲೋಬೊ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅನುಷಾ ಕೋಟ್ಯಾನ್ ಸವರು ಕಾರ್ಯಕ್ರಮದ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು.
ಸಹಕಾರ ಯೂನಿಯನ್‌ನ ನಿರ್ದೇಶಕ ಅಲೆವೂರು ಹರೀಶ್ ಕಿಣಿ, ಶಾಲೆಯ ಪಾಲನಾ ಮಂಡಳಿಯ ಅಧ್ಯಕ್ಷ ಹರಿಶ್ಚಂದ್ರ, ಸಂದೀಪ್ ಫೆರ್ನಾಂಡೀಸ್, ಫ್ರಾಂಕ್ ಪಿ ಕಾರ್ಡೋಜಾ, ಸಂಸ್ಥೆಯ ನಿರ್ದೇಶಕ, ಉದ್ಯಾವರ ಶಾಖಾ ವ್ಯವಸ್ಥಾಪಕ ಸುನಿಲ್ ಡಿಸೋಜ ಮೊದಲಾವರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಉಡುಪಿ ಕ್ಯಾಥೋಲಿಕ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಸಂಸ್ಥೆಯ ವತಿಯಿಂದ ಶಾಲಾ ಲೈಬ್ರರಿಗೆ ಸ್ಟೀಲ್ ಅಲ್ಮೆರಾವನ್ನು ಉಡುಗೊರೆಯಾಗಿ ನೀಡಲಾಯಿತು.