
Ullala: ಕಂಪೌಂಡ್ ಗೋಡೆಗೆ ಸ್ಕೂಟರ್ ಡಿಕ್ಕಿ; ಸವಾರ ಸಾವು
13/08/2025
ಸ್ಕೂಟರ್‌ವೊಂದು ಕಂಪೌಂಡ್ ಗೋಡೆಗೆ ಡಿಕ್ಕಿ ಹೊಡೆದು ಸವಾರ ಸಾವನ್ನಪ್ಪಿದ ಘಟನೆ ಉಳ್ಳಾಲ ಸಮೀಪದ ಸೋಮೇಶ್ವರ ಪುರಸಭಾ ವ್ಯಾಪ್ತಿಯ ಅಂಬಿಕಾ ರಸ್ತೆ ಎಂಬಲ್ಲಿ ನಡೆದಿದೆ.
ಮೃತಪಟ್ಟ ಸವಾರನನ್ನು ಸೋಮೇಶ್ವರ ಪುರಸಭಾ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮೀ ಮಂದಿರ ಬಳಿಯ ನಿವಾಸಿ ರಾಘವೇಂದ್ರ ಸಾಲ್ಯಾನ್(44) ಎಂದು ಗುರುತಿಸಲಾಗಿದೆ. ಖಾಸಗಿ ಕಂಪನಿಯೊಂದರಲ್ಲಿ ಇಲೆಕ್ಟ್ರಿ್ಕಲ್ ಗುತ್ತಿಗೆದಾರರಾಗಿದ್ದ ರಾಘವೇಂದ್ರ ಅವರು ಆಗಸ್ಟ್ 12ರಂದು ರಾತ್ರಿ ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ಘಟನೆಯಲ್ಲಿ ರಾಘವೇಂದ್ರ ಅವರ ತಲೆಗೆ ಗಂಭೀರವಾದ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಾರೆ.
ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿದ್ದಾರೆ.