Yallapur: ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹತ್ಯೆ; ಯಲ್ಲಾಪುರ ಠಾಣೆಯಲ್ಲಿ ಪ್ರಕರಣ

Yallapur: ಕಾಮಿಡಿ ಕಿಲಾಡಿ ಖ್ಯಾತಿಯ ಚಂದ್ರಶೇಖರ್ ಸಿದ್ಧಿ ಆತ್ಮಹತ್ಯೆ; ಯಲ್ಲಾಪುರ ಠಾಣೆಯಲ್ಲಿ ಪ್ರಕರಣ


ಕಾಮಿಡಿ ಕಿಲಾಡಿಗಳು ಖ್ಯಾತಿಯ ಚಂದ್ರಶೇಖರ ಸಿದ್ಧಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮದ ಅರಣ್ಯದಲ್ಲಿ  ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 


ವಜ್ರಳ್ಳಿ ಜೀವನಹಳ್ಳಿ ಗ್ರಾಮದ ಚಂದ್ರಶೇಖರ್ ಸಿದ್ಧಿ ಅವರು ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದರು. ಕಾಮಿಡಿ ಕಿಲಾಡಿಗಳು ನಂತರ ಯಾವುದೇ ಪಾತ್ರಗಳು ಸಿಗದೇ ಕೂಲಿ ಕೆಲಸ ಮಾಡಿಕೊಂಡಿದ್ದರು. ಅವಕಾಶಗಳು ಸಿಗದ ಕಾರಣ ಚಂದ್ರಶೇಖರ ಅವರು ಮಾನಸಿಕವಾಗಿ ನೊಂದಿದ್ದರು ಎಂದು ತಿಳಿದು ಬಂದಿದೆ. ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Ads on article

Advertise in articles 1

advertising articles 2

Advertise under the article