
Yallapur: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಡಿಕ್ಕಿ; ಮೂವರ ಸಾವು, ಹಲವರಿಗೆ ಗಾಯ
16/08/2025
ನಿಂತಿದ್ದ ಲಾರಿಗೆ ಸರ್ಕಾರಿ ಬಸ್ಸೊಂದು ಡಿಕ್ಕಿಯಾಗಿ ಮೂವರು ಸಾವನ್ನಪ್ಪಿ, ಹಲವರು ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ರಾಷ್ಟಿçÃಯ ಹೆದ್ದಾರಿ 63ರ ಹಿಟ್ಟಿನಬೈಲ್ ಕ್ರಾಸ್ ಬಳಿ ನಡೆದಿದೆ.
ಗುಳೇದಗುಡ್ಡ ನೀಲವ್ವ ಯಲದುರ್ಗಪ್ಪ ಹರದೊಳ್ಳಿ(40), ಜಾಲಿಹಾಳದ ಗಿರಿಜವ್ವ ತಂದೆ ಅಯ್ಯಪ್ಪ ಬೂದನ್ನವರ್ (30) ಹಾಗೂ ಇನ್ನೊರ್ವ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ 7 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯಾವುದೇ ಸುರಕ್ಷತಾ ಕ್ರಮವನ್ನು ಅಳವಡಿಸದೇ ಹೆದ್ದಾರಿಯಲ್ಲಿ ಲಾರಿಯನ್ನು ನಿಲ್ಲಿಸಿದ ಲಾರಿ ಚಾಲಕ ಹಾಗೂ ಅಜಾಗರೂಕತೆಯಿಂದ ಬಸ್ ಚಲಾಯಿಸಿದ ಬಸ್ ಚಾಲಕನ ವಿರುದ್ಧ ಪ್ರಕರಣ ದಾಲಾಗಿದೆ.