
Bangalore: ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಹೃದಯಾಘಾತದಿಂದ ನಿಧನ
Monday, September 29, 2025
ರಂಗಭೂಮಿ ಕಲಾವಿದ ಯಶವಂತ ಸರದೇಶಪಾಂಡೆ ಅವರು ಸೆ. 29ರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು.
ಕನ್ನಡ ರಂಗಭೂಮಿ ಕಲಾವಿದರಾಗಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಅವರು ನಟಿಸಿ-ನಿರ್ದೇಶಿಸಿರುವ ಆಲ್ ದಿ ಬೆಸ್ಟ್ ನಾಟಕ ಅಭೂತಪೂರ್ವ ಯಶಸ್ಸು ಕಂಡಿತ್ತು. ಹಾಸ್ಯ ನಾಟಕಗಳ ಮೂಲಕ ಯಶವಂತ ಸರದೇಶಪಾಂಡೆ ಚಿರಪರಿಚಿತರಾಗಿದ್ದರು. ಯಶವಂತ ಸರದೇಶಪಾಂಡೆ ಅವರು ಕಿರುತೆರೆ ಮತ್ತು ಚಲನಚಿತ್ರಗಳಲ್ಲಿ ಅಭಿನಯಿಸಿದ್ದರು.