
Bangalore: ಖ್ಯಾತ ಸಾಹಿತಿ ಎಸ್.ಎಲ್ ಭೈರಪ್ಪ ವಿಧಿವಶ; ಸಾಹಿತ್ಯ ಲೋಕ ಕಂಬನಿ
Wednesday, September 24, 2025
ಪದ್ಮಭೂಷಣ, ಹಿರಿಯ ಸಾಹಿತಿ ಎಸ್.ಎಲ್.ಭೈರಪ್ಪ ನಿಧನರಾಗಿದ್ದಾರೆ. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಭೈರಪ್ಪ ಅವರು ಬೆಂಗಳೂರಿನ ರಾಜರಾಜೇಶ್ವರಿನಗರದ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 24ರಂದು ಕೊನೆಯುಸಿರೆಳೆದಿದ್ದಾರೆ.
94 ವರ್ಷದ ಹಿರಿಯ ಸಾಹಿತಿ ಎಸ್. ಎಲ್ ಭೈರಪ್ಪ ಅವರು ಒಬ್ಬ ಪ್ರಸಿದ್ಧ ಕನ್ನಡ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಲೇಖಕರಾಗಿದ್ದು, 2023ರಲ್ಲಿ ಪದ್ಮಭೂಷಣ ಪ್ರಶಸ್ತಿಗೆ ಭಾಜನರಾಗಿದ್ದರು. ಎಸ್. ಎಲ್. ಭೈರಪ್ಪ ಅವರು ಕನ್ನಡದ ಪ್ರಮುಖ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿಂತಕರಾಗಿದ್ದರು. ಅವರ ಕಾದಂಬರಿಗಳು ಭಾರತೀಯ ಭಾಷೆಗಳಿಗೆ ಅನುವಾದಗೊಂಡಿದ್ದು, ವ್ಯಾಪಕ ಜನಪ್ರಿಯತೆ ಗಳಿಸಿವೆ. ಅವರಿಗೆ ಸರಸ್ವತೀ ಸಮ್ಮಾನ್ (2010), ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ (1975), ಪದ್ಮಭೂಷಣ (2023) ಸೇರಿದಂತೆ ಹಲವಾರು ಪ್ರಮುಖ ಪ್ರಶಸ್ತಿಗಳು ಲಭಿಸಿವೆ. ತಮ್ಮ ಹುಟ್ಟೂರಿನ ಅಭಿವೃದ್ಧಿಗಾಗಿ ಮತ್ತು ಸಮಾಜದ ಇತರ ಕಾರ್ಯಗಳಿಗೆ ನೆರವು ನೀಡಲು ಡಾ. ಎಸ್. ಎಲ್. ಭೈರಪ್ಪ ಪ್ರತಿಷ್ಠಾನ ಸ್ಥಾಪಿಸಿದ್ದಾರೆ.