Bangalore: ಮತಗಳ್ಳತನ ಆರೋಪ; ರಾಹುಲ್ ಗಾಂಧಿ ಜೊತೆ ನಿಲ್ಲುತ್ತೇನೆ- ಡಿಕೆಶಿ
Thursday, September 18, 2025
ರಾಹುಲ್ ಗಾಂಧಿ ಅವರ ಮತಗಳ್ಳತನ ಆರೋಪದ ಜೊತೆಗೆ ನಾನು ದೃಢವಾಗಿ ನಿಲ್ಲುತ್ತೇನೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಆಳಂದ ಕ್ಷೇತ್ರದಲ್ಲಿ ಮತಗಳ್ಳತನ ನಡೆದಿದೆ ಎಂಬ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ ಆರೋಪದ ಬಗ್ಗೆ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊ0ಡಿದ್ದಾರೆ. ನಾನು ರಾಹುಲ್ ಗಾಂಧಿ ಅವರ ಜೊತೆ ದೃಢವಾಗಿ ನಿಲ್ಲುತ್ತೇನೆ. ಭಾರತದ ಜನ ಪಾರದರ್ಶಕತೆ, ನ್ಯಾಯಸಮ್ಮತತೆಗೆ ಅರ್ಹರು. ಆದರೆ ಮತದಾರರನ್ನು ಗುರಿಯಾಗಿಸಿಕೊಂಡು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಗುಪ್ತ ಕಾರ್ಯಾಚರಣೆಗಳು ನಡೆಯುತ್ತಿವೆ ಎಂದಿದ್ದಾರೆ.
ಕಾಂಗ್ರೆಸ್‌ನ ಬಲಿಷ್ಠ ಬೂತ್‌ಗಳಲ್ಲಿ ಕಾನೂನುಬದ್ಧ ಮತಗಳನ್ನು ಅಳಿಸಲು ಸಾಫ್ಟ್ವೇರ್, ಹೊರಗಿನವರ ಹಸ್ತಕ್ಷೇಪ ಬಳಕೆ ಆಳಂದ ಕ್ಷೇತ್ರದ ಸಾಕ್ಷಿಗಳಿಂದ ಗೊತ್ತಾಗುತ್ತದೆ. ಇದು ಆಘಾತಕಾರಿ. ಜನರ ಧ್ವನಿಯನ್ನು ಅಡಗಿಸಲು ಉದ್ದೇಶಪೂರ್ವಕ ಮತ್ತು ಯೋಜಿತ ಪ್ರಯತ್ನವಾಗಿದೆ. ನಾವು ನಮ್ಮ ಧ್ವನಿ ಎತ್ತುವುದನ್ನ, ದಾಖಲೆಗಳನ್ನ ಬಹಿರಂಗಪಡಿಸುವುದನ್ನ ಮುಂದುವರಿಸುತ್ತೇವೆ, ವೋಟ್ ಚೋರಿ ಫ್ಯಾಕ್ಟರಿ ಎಂದು ಬರೆದುಕೊಂಡಿದ್ದಾರೆ.