
Gangolli: ಶಾರದೋತ್ಸವ ವಿಸರ್ಜನಾ ಮೆರವಣಿಗೆ - ಮದ್ಯ ಮಾರಾಟ ನಿಷೇಧ
Monday, September 29, 2025
ನವರಾತ್ರಿ ಹಬ್ಬದ ಪ್ರಯುಕ್ತ ಅಕ್ಟೋಬರ್ 3ರಂದು ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಸೇವಾ ಸಂಘ(ರಿ) ಗಂಗೊಳ್ಳಿ ಇವರ 51ನೇ ವರ್ಷದ ಶಾರದೋತ್ಸವ ವಿಸರ್ಜನಾ ಮೆರವಣಿಗೆ ಪ್ರಮುಖ ಕೋಮು ಸೂಕ್ಷ್ಮ ಸ್ಥಳಗಳ ಮೂಲಕ ಹಾದು ಹೋಗಲಿರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ನಿಟ್ಟಿನಲ್ಲಿ, ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಮತ್ತು ಗುಜ್ಜಾಡಿ ಗ್ರಾಮಗಳ ವ್ಯಾಪಿಯಲ್ಲಿ ಅಕ್ಟೋಬರ್ 3ರಂದು ಬೆಳಿಗೆ, 6 ಗಂಟೆಯಿಂದ ರಾತ್ರಿ 12 ಗಂಟೆಯವರೆಗೆ ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅದೇಶಿಸಿರುತ್ತಾರೆ.