
Karkala: ಅ. 2ರಂದು ಕೆಸಿಸಿಸಿಐ ಪ್ರೇರಣಾ ಪ್ರಶಸ್ತಿ ಪ್ರದಾನ ಸಮಾರಂಭ
Monday, September 29, 2025
ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಮತ್ತು ಇಂಡಸ್ಟ್ರೀ ಉಡುಪಿ ಜಿಲ್ಲೆ ಇದರ ಸಂಘಟನೆಯ ವಾರ್ಷಿಕ ಸಹಮಿಲನ ಮತ್ತು ಪ್ರೇರಣ ಪ್ರಶಸ್ತಿ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರವು ಅಕ್ಟೋಬರ್ 2ರಂದು ಕಾರ್ಕಳ ಅತ್ತೂರು ಸಂತ ಲಾರೆನ್ಸ್ ಬೆಸಿಲಿಕಾದ ಸಮುದಾಯ ಸಭಾ ಭವನದಲ್ಲಿ ನಡೆಯಲಿದೆ ಎಂದು ಸಂಘಟನೆಯ ಅಧ್ಯಕ್ಷರಾದ ಸಂತೋಷ್ ಡಿಸಿಲ್ವಾ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಐದು ವರ್ಷಗಳಿಂದ ಸಮುದಾಯದ ಅರ್ಹ ಉದ್ಯಮಿಗಳನ್ನು ಗುರುತಿಸಿ ಪ್ರೇರಣಾ ಪ್ರಶಸ್ತಿ ನೀಡಿ ಗೌರವಿಸುವ ಕಾರ್ಯಕ್ರಮಗಳನ್ನು ಮಾಡಿಕೊಂಡು ಬಂದಿದೆ. ಅಕ್ಟೋಬರ್ 2 ರಂದು ಕಾರ್ಕಳದ ಅತ್ತೂರಿನ ಸಂತ ಲಾರೆನ್ಸ್ ಬೆಸಿಲಿಕಾದ ಸಮುದಾಯ ಭವನದಲ್ಲಿ ಸಂಘಟನೆಯ ವಾರ್ಷಿಕ ಸಹಮಿಲನ ಮತ್ತು ಪ್ರೇರಣ ಪ್ರಶಸ್ತಿ 2025 ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಉದ್ಯಮಿ ಪ್ರಶಸ್ತಿ 2025- ಫ್ರಾನ್ಸಿಸ್ ಡಿಸೋಜಾ, ಮಹಿಳಾ ಉದ್ಯಮಿ ಪ್ರಶಸ್ತಿ 2025- ಲವಿಟಾ ಅಂದ್ರಾದೆ, ಉಡುಪಿ, ಯುವ ಉದ್ಯಮಿ ಪ್ರಶಸ್ತಿ 2025- ಅರುಣ್ ಸುಶೀಲ್ ಕೋಟ್ಯಾನ್, ಪ್ರಗತಿಪರ ಕೃಷಿಕ ಪ್ರಶಸ್ತಿ 2025- ಡಾ. ಜೋಸೆಫ್ ಲೋಬೋ ಇವರನ್ನು ಆಯ್ಕೆ ಮಾಡಲಾಗಿದೆ. ಅ. 2ರ ಸಂಜೆ 6.00 ಗಂಟೆಗೆ ನಡೆಯುವ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಕರಾವಳಿ ಕ್ರಿಶ್ಚಿಯನ್ ಚೇಂಬರ್ ಆಫ್ ಕಾಮರ್ಸ್ ಅಂಡ್ ಇಂಡಸ್ಟ್ರಿ ಗೌರವ ಅಧ್ಯಕ್ಷ ಡಾ. ಜೆರಿ ವಿನ್ಸೆಂಟ್ ಡಯಾಸ್, ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಉಡುಪಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷ ಡಾ. ಜೆರಾಲ್ಡ್ ಐಸಾಕ್ ಲೋಬೊ, ರೈಟ್ ರೆವರೆಂಡ್ ಹೇಮಚಂದ್ರ ಕುಮಾರ್ ಭಾಗವಹಿಸಲಿದ್ದಾರೆ.
ಕಾರ್ಯಕ್ರಮದ ಮೊದಲು ಆಸಕ್ತ ಕ್ರೈಸ್ತ ಯುವ ಉದ್ಯಮಿಗಳಿಗೆ ಪರಿಣಿತ ಸಂಪನ್ಮೂಲ ವ್ಯಕ್ತಿಗಳಾದ ವಾಲ್ಟರ್ ನಂದಳಿಕೆ ಹಾಗೂ ಸೌಜನ್ಯ ಹೆಗ್ಡೆ ಇವರಿಂದ ಮಾಹಿತಿ ಕಾರ್ಯಗಾರ ನಡೆಯಲಿದೆ. ಸಂಜೆ ವೇದಿಕೆ ಕಾರ್ಯಕ್ರಮದ ನಂತರ ಮನೋರಂಜನ ಕಾರ್ಯಕ್ರಮ ಹಾಗೂ ಸದಸ್ಯ ಕುಟುಂಬದ ಸದಸ್ಯರ ಸಹ ಮಿಲನದೊಂದಿಗೆ ಕಾರ್ಯಕ್ರಮ ಕೊನೆಗೊಳ್ಳಲಿದೆ ಎಂದು ಮಾಹಿತಿ ನೀಡಿದರು.
ಸಂಘಟನೆಯ ಗೌರವ ಅಧ್ಯಕ್ಷರಾಗಿ ಡಾ. ಜೆರಿ ವಿನ್ಸೆಂಟ್ ಡಾಯನ್, ಅಧ್ಯಕ್ಷರಾಗಿ ಸಂತೋಷ್ ಡಿಸಿಲ್ವ, ಪ್ರಧಾನ ಕಾರ್ಯದರ್ಶಿಯಾಗಿ ಆಲ್ವಿನ್ ಕ್ವಾಡ್ರಸ್ ಹಾಗೂ ಖಜಾಂಜಿಯಾಗಿ ಮ್ಯಾಕ್ಸಿಮ್ ಸ್ಟೇಫನ್ ಸಲ್ದಾನ ಸೇವೆ ಸಲ್ಲಿಸುತ್ತಿದ್ದಾರೆ. ಕಳೆದ 12 ವರ್ಷಗಳಲ್ಲಿ ಈ ಸಂಸ್ಥೆ ತನ್ನ ಸದಸ್ಯರಿಗೆ ಉದ್ಯಮ ಶೀಲ ಶಿಬಿರಗಳು, ಕಾರ್ಯಾಗಾರಗಳು ಹಾಗೂ ಉದ್ಯಮಕ್ಕೆ ಸಂಬ0ಧಪಟ್ಟ0ತೆ ಜಿ ಎಸ್ ಟಿ ಆದಾಯ ತೆರಿಗೆ, ಕೇಂದ್ರ ಹಾಗೂ ರಾಜ್ಯ ಬಜೆಟ್ ವಿಚಾರ ವಿನಿಮಯ ಹಾಗೂ ಇನ್ನಿತರ ಕಾನೂನು ಮಾಹಿತಿಗಳನ್ನು ನಡೆಸುತ್ತಾ ಬಂದಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪ್ರಧಾನ ಕಾರ್ಯದರ್ಶಿ ಆಲ್ವಿನ್ ಕ್ವಾಡ್ರಸ್, ಖಜಾಂಚಿ ಮ್ಯಾಕ್ಷಿಮ್ ಸ್ಟೇಫನ್ ಸಲ್ಡಾನಾ, ಸಹಕಾರ್ಯದರ್ಶಿ ವಿಲ್ಸನ್ ಡಿಸೋಜಾ, ನಿರ್ದೇಶಕರಾದ ಜೀವನ್ ಸಾಲಿನ್ಸ್ ಉಪಸ್ಥಿತರಿದ್ದರು.