
Karkala: ದಕ್ಷಿಣ ವಲಯ ಅಥ್ಲೆಟಿಕ್ ಚಾಂಪಿಯನ್ ಶಿಪ್; ನಿಟ್ಟೆ ಕಾಲೇಜಿಗೆ ಪ್ರಶಸ್ತಿ
Saturday, September 27, 2025
ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ಸೆಪ್ಟೆಂಬರ್ 23 ರಿಂದ 25 ರವರೆಗೆ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ ವಿಭಾಗದಲ್ಲಿ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಂದಿನಿ 5,000 ಮೀಟರ್ ಓಟ ಮತ್ತು 3,000 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ಪಡೆದಿದ್ದಾರೆ.
ಇದೇ ವಯೋವಿಭಾಗದಲ್ಲಿ 100 ಮೀಟರ್ ಓಟ ಮತ್ತು 4x100 ಮೀ ರಿಲೇಯಲ್ಲಿ ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿನಿ ಸ್ತುತಿ ಪಿ ಶೆಟ್ಟಿ ಬೆಳ್ಳಿ ಪದಕವನ್ನು ತಮ್ಮದಾಗಿಸಿಕೊಂಡರು.