
Kaup: ಬಿಜೆಪಿ ಎಂಎಲ್ಸಿ ಗಳಿಂದ ಮಾರಿಗುಡಿಯಲ್ಲಿ ವಿಶೇಷ ಪೂಜೆ, ಘಂಟಾ ನಾದ ಸೇವೆ
Thursday, September 25, 2025
ಶರನ್ನವರಾತ್ರಿ ಮಹೋತ್ಸವದ ಪ್ರಯುಕ್ತ 3ನೇ ದಿನವಾದ ಸೆಪ್ಟೆಂಬರ್ 24ರಂದು ಬೆಂಗಳೂರು ಎಂ.ಎಲ್. ಸಿ ಗಳಾದ ನವೀನ್, ಶರವಣ, ಡಿ. ಎಸ್ ಅರುಣ್, ಪ್ರತಾಪ್ ಸಿಂಹ ನಾಯಕ್, ತಿಪ್ಪಣ್ಣ ಹಾಗೂ ಮತ್ತಿತರರು ಕಾಪು ಶ್ರೀ ಹೊಸ ಮಾರಿಗುಡಿಗೆ ಆಗಮಿಸಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮನ ದರ್ಶನ ಪಡೆದರು.
ವ್ಯವಸ್ಥಾಪನಾ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಅಮ್ಮನ ಅನುಗ್ರಹ ಪ್ರಸಾದ ನೀಡಿ ಗೌರವಿಸಲಾಯಿತು.
ಎಂ. ಎಲ್. ಸಿ ನವೀನ್ ಅವರು ಘಂಟಾನಾದ ಸೇವೆಯನ್ನು ನೀಡಿದರು.
ದೇವಳದ ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಮತ್ತು ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ರಾಜರ್ಷಿ ಕೆ. ವಾಸುದೇವ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿಯ ಪ್ರಧಾನ ಸಂಚಾಲಕ ಮತ್ತು ಘಂಟಾನಾದ ಸೇವಾ ಸಮಿತಿಯ ಅಧ್ಯಕ್ಷ ಯೋಗೀಶ್ ವಿ.ಶೆಟ್ಟಿ ಬಾಲಾಜಿ, ವ್ಯವಸ್ಥಾಪನಾ ಸಮಿತಿಯ ಸದಸ್ಯ ಮಾಧವ ಆರ್ ಪಾಲನ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.