
Mangalore: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಗಳಿಬ್ಬರ ಬಂಧನ
Friday, September 26, 2025
ಮಂಗಳೂರಿನ ಬರ್ಕೆ ಪೊಲೀಸ್ ಠಾಣೆ ಹಾಗೂ ಮಂಗಳೂರು ಪೂರ್ವ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಪ್ರತ್ಯೇಕ ಪ್ರಕರಣಗಳಿಗೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ನಿವಾಸಿ ಶೇಕ್ ಶಹಬಾಜ್(31) ಹಾಗೂ ಕಸಬಾ ಬೆಂಗ್ರೆ ನಿವಾಸಿ ಮೊಹಮ್ಮದ್ ನಿಜಾಮುದ್ದೀನ್ ಬಂಧಿತ ಆರೋಪಿ. ವಾರಂಟ್ ಆರೋಪಿ ಶೇಕ್ ಶಹಬಾಜ್‌ನನ್ನು ಆಂಧ್ರಪ್ರದೇಶದ ಶ್ರೀ ಸತ್ಯಸಾಯಿ ಜಿಲ್ಲೆಯ ಇಂದುಪುರ ತಾಲೂಕಿನ ಸುರುಗೂರಿನಲ್ಲಿ ಬರ್ಕೆ ಪೊಲೀಸರು ಬಂಧಿಸಿದ್ದಾರೆ. ಇನ್ನೋರ್ವ ವಾರಂಟ್ ಆರೋಪಿ ಮಹಮ್ಮದ್ ನಿಜಾಮುದ್ದೀನ್‌ನನ್ನು ಮಂಗಳೂರು ಪೂರ್ವ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇಬ್ಬರು ಆರೋಪಿಗಳಿಗೂ ನ್ಯಾಯಾಂಗ ಬಂಧನ ವಿಧಿಸಲಾಗಿದೆ.