Mumbai: ಮಾಲೆಂಗಾವ್ ಸ್ಫೋಟ ಪ್ರಕರಣದಲ್ಲಿ ಖುಲಾಸೆಗೊಂಡವರಿಗೆ ಹೈಕೋರ್ಟ್ ನೋಟಿಸ್
Thursday, September 18, 2025
2008 ರ ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ಇತ್ತೀಚೆಗೆ ಖುಲಾಸೆಗೊಂಡ ಭೋಪಾಲ್‌ನ ಬಿಜೆಪಿ ಸಂಸದೆ ಸಾಧ್ವಿ ಪ್ರಜ್ಞಾ ಸಿಂಗ್ ಠಾಕೂರ್, ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಮತ್ತು ಇತರ ಐದು ಜನರಿಗೆ ಬಾಂಬೆ ಹೈಕೋರ್ಟ್ ನೋಟಿಸ್ ನೀಡಿದೆ.
ಮಾಲೆಂಗಾವ್ ಪ್ರಕರಣದಲ್ಲಿ ಆರೋಪಿಗಳನ್ನು ಖುಲಾಸೆಗೊಳಿಸಿದ್ದ, ನಿರ್ಧಾರವನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮನವಿಗಳನ್ನು ಪರಿಶೀಲನೆ ಮಾಡಿದ ಬಾಂಬೆ ಹೈಕೋರ್ಟ್, ಖುಲಾಸೆಗೊಂಡ ಪ್ರತಿಯೊಬ್ಬರಿಗೂ ನೋಟಿಸ್ ಜಾರಿ ಮಾಡಿದೆ.
ಖುಲಾಸೆಗೊಂಡವರೊ0ದಿಗೆ ನ್ಯಾಯಾಲಯವು ರಾಷ್ಟ್ರೀಯ ತನಿಖಾ ಸಂಸ್ಥೆಗೂ ನೋಟಿಸ್ ಕಳುಹಿಸಿದ್ದು, ಆರು ವಾರಗಳೊಳಗೆ ಉತ್ತರಿಸುವಂತೆ ಸೂಚಿಸಿದೆ. ಇನ್ನು, ಮೇಲ್ಮನವಿ ಸಲ್ಲಿಸಿದ ಸಂತ್ರಸ್ತರ ಪರವಾಗಿ ಹಾಜರಾದ ವಕೀಲ ಮತೀನ್ ಶೇಖ್, ವಿಚಾರಣೆಯ ಸಮಯದಲ್ಲಿ ಆರು ಮೇಲ್ಮನವಿದಾರರಲ್ಲಿ ಕನಿಷ್ಠ ನಾಲ್ವರನ್ನು ಸಾಕ್ಷಿಗಳಾಗಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ವಾದಿಸಿದ ನಂತರ ನೋಟಿಸ್‌ಗಳನ್ನು ನೀಡಲಾಗಿದ್ದು, ಮೊದಲ ಮೇಲ್ಮನವಿದಾರರು ವಿಚಾರಣಾ ನ್ಯಾಯಾಲಯ, ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನ ವಿಚಾರಣೆಯಲ್ಲಿ ಮಧ್ಯಪ್ರವೇಶಿಸಿದ್ದಾರೆ ಎಂದು ಅವರು ವಾದಿಸಿದ್ದಾರೆ.