-->
Mysore: ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಿಂದನೆ; ನಿವೃತ್ತ ಯೋಧ ಬಂಧನ

Mysore: ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯರಿಗೆ ನಿಂದನೆ; ನಿವೃತ್ತ ಯೋಧ ಬಂಧನ


ಸಾಮಾಜಿಕ ಜಾಲತಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿದ್ದ ನಿವೃತ್ತ ಯೋಧರೊಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ವಸಂತ್ ಕುಮಾರ್ (40) ಬಂಧಿತ ಆರೋಪಿ. ಸಕಲೇಶಪುರದ ವಸಂತ್ ಕುಮಾರ್ ನಿವೃತ್ತ ಯೋಧನಾಗಿದ್ದು, ನಿವೃತ್ತಿ ಬಳಿಕ ಊರಿನಲ್ಲಿ ವ್ಯವಸಾಯ ಮಾಡುತ್ತಿದ್ದರು. ಮೈಸೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಕನ್ನಡ ಬರುತ್ತ ಎಂದು ಸಿಎಂ ಸಿದ್ದರಾಮಯ್ಯ  ಕೇಳಿದ್ದರು. ಇದಕ್ಕೆ ಹನುಮ ಭಕ್ತ ಎನ್ನುವ ಫೇಸ್‌ಬುಕ್ ಪೇಜ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ನಿಂದಿಸಿ ವಸಂತ್ ಕುಮಾರ್ ಪೋಸ್ಟ್ ಹಾಕಿದ್ದರು. ಸಿಎಂ ಕುರಿತು ಏಕವಚನದಲ್ಲೇ ಕೆಟ್ಟದಾಗಿ ನಿಂದಿಸಿ ಪೋಸ್ಟ್ ಮಾಡಿದ್ದ ವಸಂತ ಕುಮಾರ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.




Ads on article

Advertise in articles 1

advertising articles 2

Advertise under the article