-->
 New Delhi: ಬಾನು ಮುಸ್ತಾಕ್‌ ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ  ವಜಾ

New Delhi: ಬಾನು ಮುಸ್ತಾಕ್‌ ದಸರಾ ಉದ್ಘಾಟನೆ ವಿರೋಧಿಸಿ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ವಜಾ


ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಆಹ್ವಾನ ನೀಡಿರುವ ರಾಜ್ಯಸರ್ಕಾರದ ನಿರ್ಧಾರಕ್ಕೆ ತಡೆ ನೀಡಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠವು ಅರ್ಜಿದಾರರ ವಾದವನ್ನು ಆಲಿಸಿದ ಬಳಿಕ ಯಾವುದೇ ವಿಚಾರಣೆ ಅಗತ್ಯವಿಲ್ಲವೆಂದು ಹೇಳಿ ಅರ್ಜಿಯನ್ನು ತಳ್ಳಿಹಾಕಿತು.

ಅರ್ಜಿದಾರರ ಪರ ಹಿರಿಯ ವಕೀಲ ಪಿ.ಬಿ. ಸುರೇಶ್, ಹಿಂದೂಯೇತರರಿಗೆ ದೇವಾಲಯದೊಳಗೆ ಧಾರ್ಮಿಕ ವಿಧಿವಿಧಾನಗಳಲ್ಲಿ ಭಾಗವಹಿಸಲು ಅವಕಾಶ ಇಲ್ಲ ಎಂದು ವಾದಿಸಿದರು. ಆದರೆ ನ್ಯಾಯಮೂರ್ತಿಗಳು ಮೂರು ಬಾರಿ ಸ್ಪಷ್ಟವಾಗಿ ವಜಾಗೊಳಿಸಲಾಗಿದೆ ಎಂದು ಘೋಷಿಸಿದರು. 

ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ ಪ್ರಕರಣವನ್ನು ವಜಾಗೊಳಿಸಿದೆ.





Ads on article

Advertise in articles 1

advertising articles 2

Advertise under the article