-->
Puttur: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ.22ರಿಂದ ಅ. 2ರವರೆಗೆ ಶಾರದೋತ್ಸವ

Puttur: ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಸೆ.22ರಿಂದ ಅ. 2ರವರೆಗೆ ಶಾರದೋತ್ಸವ


91ನೇ ವರ್ಷದ ಶಾರದೋತ್ಸವವು ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ ಸೆ. 22ರಿ0ದ ನವರಾತ್ರಿ ಪೂಜೆಯೊಂದಿಗೆ ಆರಂಭಗೊಳ್ಳಲಿದೆ. ಸೆ.29ಕ್ಕೆ ಶ್ರೀ ಶಾರದೆಯ ವಿಗ್ರಹ ಪ್ರತಿಷ್ಠೆ, ಸೆ. 30 ಕ್ಕೆ ಸಾಮೂಹಿಕ ಚಂಡಿಕಾ ಹೋಮ ನಡೆಯಲಿದ್ದು, ಅಕ್ಟೋಬರ್ .2ಕ್ಕೆ ವೈಭವದ ಶೋಭಾಯಾತ್ರೆಯು ಸಂಜೆ ಬೊಳುವಾರಿನಿಂದ ದರ್ಬೆಯ ತನಕ ನಡೆಯಲಿದೆ ಎಂದು ಶ್ರೀ ಶಾರದಾ ಭಜನಾ ಮಂದಿರದ ಅಧ್ಯಕ್ಷ ಸೀತಾರಾಮ ರೈ ಕೆದಂಬಾಡಿಗುತ್ತು ಅವರು ಮಾಹಿತಿ ನೀಡಿದ್ದಾರೆ. 

ಭಜನಾ ಮಂದಿರದಲ್ಲಿ ಸೆ.22ರಿ0ದ ನವರಾತ್ರಿ ಉತ್ಸವವು ಪ್ರಾರಂಭಗೊಳ್ಳಲಿದೆ. ಪ್ರತಿ ದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮ, ರಾತ್ರಿ ಭಜನೆ ಮತ್ತು ಮಹಾಪೂಜೆ ನಡೆಯಲಿದೆ. ಶೋಭಯಾತ್ರೆ ಸಮಿತಿ ಗೌರವಾಧ್ಯಕ್ಷ ಸಂಜೀವ ಮಠಂದೂರು ಅವರು ನವರಾತ್ರಿ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಸೆಪ್ಟೆಂಬರ್29ಕ್ಕೆ ಶ್ರೀ ಶಾರದಾ ವಿಗ್ರಹ ಪ್ರತಿಷ್ಠೆ ನಡೆಯಲಿದೆ. ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆಯವರು ಶಾರದೋತ್ಸವವನ್ನು ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್29ಕ್ಕೆ ಸಂಜೆೆ 5.30ಕ್ಕೆ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೂಟ್ಟು ಅವರು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡಲಿದ್ದಾರೆ. 

ಅ.2ಕ್ಕೆ ಶ್ರೀ ಶಾರದಾ ದೇವಿಯ ಭವ್ಯ ಶೋಭಾಯಾತ್ರೆ ನಡೆಯಲಿದೆ. ಶೋಭಾಯಾತ್ರೆಯ ಆರಂಭದಲ್ಲಿ ಸಂಜೆ 3 ಗಂಟೆಯಿ0ದ ಭಕ್ತಿ ರಸಮಂಜರಿ ಕಾರ್ಯಕ್ರಮ ಬೊಳುವಾರು ವೃತ್ತದಲ್ಲಿ ನಡೆಯಲಿದೆ. ಅದಾದ ಬಳಿಕ ಸಂಜೆ 5 ಗಂಟೆಗೆ ಶೋಭಯಾತ್ರೆ ಅರಂಭಗೊಳ್ಳಲಿದೆ. ಶೋಭಾಯಾತ್ರೆಯಲ್ಲಿ ಚೆಂಡೆಮೇಳ, ವಾದ್ಯಮೇಳ, ಕುಣಿತ ಭಜನೆ, ಕರ್ನಾಟಕ, ಕೇರಳ ಹಾಗೂ ತುಳುನಾಡಿನ ವೈವಿದ್ಯಮಯ ಕಲಾ ತಂಡಗಳ ಸಾಂಸ್ಕೃತಿಕ ಪ್ರದರ್ಶನಗಳೊಂದಿಗೆ ಸಾಗಲಿದೆ. ವಿಶೇಷವಾಗಿ ಶೋಭಾಯಾತ್ರೆಯಲ್ಲಿ ಡಿಜೆ, ಸುಡುಮದ್ದು ಪ್ರದರ್ಶನಗಳನ್ನು ನಿಷೇಧಿಸಲಾಗಿದೆ. ಇದರ ಜೊತೆಗೆ ನಾಸಿಕ್ ಬ್ಯಾಂಡ್‌ಗಳಿಗೆ ಅವಕಾಶ ಇರುವುದಿಲ್ಲ. ನಮ್ಮ ನಾಡಿನ ಸಂಪ್ರದಾಯ, ಸಂಸ್ಕೃತಿ, ಧಾರ್ಮಿಕತೆಗೆ ಅನುಗುಣವಾಗಿ ಶೋಭಾಯಾತ್ರೆ ಸುಂದರವಾಗಿ, ಶಿಸ್ತು ಹಾಗೂ ಅಚ್ಚುಕಟ್ಟಾಗಿ ನೆರವೇರಲಿದೆ. ಶೋಭಾಯಾತ್ರೆಯು ನಿಗದಿತ ಸಮಯದಲ್ಲಿ ಸಂಜೆ 5 ಗಂಟೆಗೆ ಬೊಳುವಾರಿನಿಂದ ಪ್ರಾರಂಭಗೊ0ಡು ದರ್ಬೆ ವೃತ್ತದ ಬಳಿ ತಲುಪಲಿದೆ. ಅಲ್ಲಿಂದ ಹಿಂದಿರುಗಿ ದೇವಳದ ಕೆರೆಯಲ್ಲಿ ಶ್ರೀ ಶಾರದೆಯ ವಿಗ್ರಹವು ಜಲಸ್ತಂಭಗೊಳ್ಳಲಿದೆ. ಈ ಭಾರಿ ಆಂಧ್ರ ಪ್ರದೇಶದ ಕಲಾ ತಂಡಗಳು ಶೋಭಾಯಾತ್ರೆಯಲ್ಲಿ ವಿಶೇಷ ಆಕರ್ಷಣೆಯಾಗಲಿದೆ ಎಂದರು. ಕಾನೂನಿನ ಚೌಕಟ್ಟಿನಂತೆ ಕಾರ್ಯಕ್ರಮ ಸುಸೂತ್ರವಾಗಿ ನಡೆಯಲಿದೆ ಎಂದರು.

ಶೋಭಾಯಾತ್ರೆಯಲ್ಲಿ ಬೊಳುವಾರು ವೃತ್ತದಿಂದ ದರ್ಬೆಯ ತನಕ 6 ಕೇಂದ್ರಗಳಲ್ಲಿ ನಿಂತು ಸಾರ್ವಜನಿಕರಿಗೆ ಶೋಭಾಯಾತ್ರೆ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಈ ಕೇಂದ್ರಗಳಲ್ಲಿ ಕಲಾ ತಂಡಗಳಿಗೆ ಪ್ರದರ್ಶನ ನೀಡಲು ಸ್ಥಳಗಳನ್ನು ನಿಗದಿಪಡಿಸಲಾಗಿದ್ದು, ಬೊಳುವಾರು ವೃತ್ತ, ಇನ್‌ಲ್ಯಾಂಡ್ ಮಯೂರ, ಶ್ರೀಧರ ಭಟ್ ಬ್ರದರ್ಸ್, ಬಸ್ ನಿಲ್ದಾಣ, ಹೊಟೇಲ್ ಸುಜಾತ ಬಳಿ ಹಾಗು ದರ್ಬೆ ವೃತ್ತದ ಬಳಿ ಕಲಾ ತಂಡಗಳಿ0ದ ವಿಶೇಷ ಪ್ರದರ್ಶನಗಳು ನಡೆಯಲಿದೆ.

ಪತ್ರಿಕಾಗೋಷ್ಟಿಯಲ್ಲಿ ಕೋಶಾಧಿಕಾರಿ ನವೀನ್ ಕುಲಾಲ್, ಪ್ರದಾನ ಕಾರ್ಯದರ್ಶಿ ಜಯಂತಿ ಉರ್ಲಾoಡಿ,, ನವನೀತ್ ಬಜಾಜ್, ಚಿತ್ರ ಪ್ರಸಾದ್ ರೈ ಉಪಸ್ಥಿತರಿದ್ದರು.



Ads on article

Advertise in articles 1

advertising articles 2

Advertise under the article