
Thrissur: ರಾಹುಲ್ ಗಾಂಧಿಗೆ ಕೊಲೆ ಬೆದರಿಕೆ; ಬಿಜೆಪಿ ವಕ್ತಾರ ಪ್ರಿಂಟು ಸೆರೆ
Tuesday, September 30, 2025
ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಯನ್ನು ಎದೆಗೆ ಗುಂಡಿಟ್ಟು ಕೊಲ್ಲುವುದಾಗಿ ಬೆದರಿಕೆ ಹಾಕಿದ ಕೇರಳದ ಬಿಜೆಪಿ ನಾಯಕ ಪ್ರಿಂಟು ಮಹಾದೇವನ್ ನನ್ನು ಪೆರಮಂಗಲಂ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ತ್ರಿಶೂರ್ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಗೋಕುಲ್ ಗುರುವಾಯೂರ್ ಪೆರಮಂಗಲಂ ಪೊಲೀಸರಿಗೆ ದೂರು ಸಲ್ಲಿಸಿದ್ದು, ಪ್ರಕರಣದ ತನಿಖೆಗಾಗಿ ಪೊಲೀಸರು ಬಿಜೆಪಿ ತ್ರಿಶೂರ್ ಜಿಲ್ಲಾ ನಾಯಕರ ಮನೆಗಳ ಮೇಲೆ ದಾಳಿ ನಡೆಸಿದ ಬೆನ್ನಿಗೀ ಪ್ರಿಂಟು ಪೊಲೀಸರೆದುರು ಹಾಜರಾರೆನ್ನಲಾಗಿದೆ.
ಪ್ರಿಂಟು ವಿರುದ್ಧ ಕೊಲೆ ಬೆದರಿಕೆ, ಗಲಭೆಗೆ ಪ್ರಚೋದನೆ ಮತ್ತು ಸಮಾಜದಲ್ಲಿ ದ್ವೇಷ ಹರಡುವುದು ಮತ್ತಿತರ ಗಂಭೀರ ಆರೋಪಗಳಡಿ ಪ್ರಕರಣ ದಾಖಲಾಗಿದೆ.