
Ucchila: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು
Tuesday, September 30, 2025
ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾ.ಹೆ. 66ರ ಉಚ್ಚಿಲದ ಕೆನರಾ ಬ್ಯಾಂಕ್ ಎಟಿಎಂ ಎದುರು ಇಂದು ಬೆಳಗಿನ ಜಾವ ನಡೆದಿದೆ.
ಮೃತ ಬೈಕ್ ಸವಾರನನ್ನು ಇನ್ನಷ್ಟೇ ಗುರುತು ಹಿಡಿಯಬೇಕಿದೆ. ಉಡುಪಿ ಕಡೆಯಿಂದ ಮಂಗಳೂರು ಕಡೆ ಹೋಗುತ್ತಿದ್ದ ಪುತ್ತೂರು ನೋಂದಣಿ ಇರುವ ಬೈಕಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಇದರಿಂದ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿರಬಹುದೆಂದು ಅಂದಾಜಿಸಲಾಗಿದೆ.
ಸಾಮಾಜಿಕ ಕಾರ್ಯಕರ್ತ ಜಮಾಲುದ್ದೀನ್ ಉಚ್ಚಿಲ ಮೂಳೂರು ಅಂಬುಲೆನ್ಸ್ ನ ಹಮೀದ್ ಅವರು ಮೃತದೇಹವನ್ಸು ಶವಾಗಾರಕ್ಕೆ ಸಾಗಿಸಲು ಸಹಕರಿಸಿದರು. ಪಡುಬಿದ್ರೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.