Udupi: ಜಿಲ್ಲೆಯಲ್ಲಿ 1 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸಿ ಓಟ್ ಚೋರ್ ಗದ್ದಿ ಜೋಡ್ ಅಭಿಯಾನಕ್ಕೆ ಬೆಂಬಲ; ಐವನ್ ಡಿಸೋಜಾ(Video)
ಕಾಂಗ್ರೆಸ್ ನಾಯಕ ರಾಹುಲ್ ಗಾಂದಿ ಅವರು ಮತಗಳ್ಳತನದ ವಿರುದ್ಧ ಆರಂಭಿಸಿರುವ ವೋಟ್ ಚೋರ್ ಗದ್ದಿ ಚೋಡ್ ಅಭಿಯಾನಕ್ಕೆ ಉಡುಪಿ ಜಿಲ್ಲೆಯ ಎಲ್ಲಾ ಬೂತ್‌ಗಳಿಗೆ ತೆರಳಿ 1 ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸುವ ಮೂಲಕ ಬೆಂಬಲ ಸೂಚಿಸಲಾಗುವುದು ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ವಿರೋಧ ಪಕ್ಷ ನಾಯಕ ರಾಹುಲ್ ಗಾಂಧಿ ಅವರು ವೋಟ್ ಚೋರ್ ಗದ್ದಿ ಚೋಡ್ ಅಭಿಯಾನ ಆರಂಭಿಸಿದ್ದು ಈ ಅಭಿಯಾನಕ್ಕೆ ರಾಷ್ಟ್ರ ಮತ್ತು ರಾಜ್ಯದ ಎಲ್ಲೆಡೆ ಬೆಂಬಲ ವ್ಯಕ್ತವಾಗಿದೆ. ರಾಜ್ಯ ಮತ್ತು ದೇಶದಲ್ಲಿ ಆಗಿರುವ ಮತಗಳ್ಳತನವನ್ನು ಚುನಾವಣಾ ಆಯೋಗದ ಮುಂದೆ ಇಡುವ ಅಭಿಯಾನ ಇದಾಗಿದೆ. ರಾಹುಲ್ ಗಾಂಧಿ ಪುರಾವೆ ಸಮೇತ ಹಗರಣ ಬಿಚ್ಚಿಟ್ಟಿದ್ದಾರೆ. ಮತದಾನದ ಹಕ್ಕಿನ ಕಳ್ಳತನ ನಿರಂತರವಾಗಿ ಆಗುತ್ತಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಉಡುಪಿ ಕಾಂಗ್ರೆಸ್ ನಿಂದಲೂ ಸಹಿ ಅಭಿಯಾನವನ್ನು ಹಮ್ಮಿಕೊಂಡಿದ್ದು, ಸೆಪ್ಟೆಂಬರ್ ತಿಂಗಳ ಅಂತ್ಯದೊಳಗಡೆ 1,10,100 ಸಹಿ ಸಂಗ್ರಹಿಸುವ ಗುರಿ ಹೊಂದಿದ್ದೇವೆ. ಒಂದು ಲಕ್ಷಕ್ಕೂ ಅಧಿಕ ಸಹಿ ಸಂಗ್ರಹಿಸಿ ರಾಹುಲ್ ಗಾಂಧಿಯವರಿಗೆ ಬೆಂಬಲ ನೀಡಲಿದ್ದು, ಇದು ಇಡೀ ರಾಜ್ಯದಲ್ಲಿ ನಡೆಯಲಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅಶೋಕ್ ಕೊಡವೂರು, ಜಯಪ್ರಕಾಶ್ ಹೆಗ್ಡೆ, ಎಂಎ ಗಫೂರ್, ದಿನೇಶ್ ಹೆಗ್ಡೆ ಮೊಳಹಳ್ಳಿ ,ಪ್ರಸಾದ್ ಕಾಂಚನ್, ಮುನಿಯಾ ಉದಯ ಶೆಟ್ಟಿ, ಕಿಶನ್ ಹೆಗ್ಡೆ ಕೊಳ್ಕೆಬೈಲು ಮತ್ತಿತರರು ಸುದ್ದಿಗೋಷ್ಠಿಯಲ್ಲಿದ್ದರು.