-->
Udupi: ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹ

Udupi: ಅ. 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹ


ವಿಶ್ವ ಮಾನಸಿಕ ಆರೋಗ್ಯ ದಿನವನ್ನು ಅಕ್ಟೋಬರ್ 10ರಂದು ಪ್ರತಿವರ್ಷ ಆಚರಿಸಲಾಗುತ್ತಿದ್ದು, ಈ ಬಾರಿ “ವಿಪತ್ತುಗಳು ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಮಾನಸಿಕ ಆರೋಗ್ಯ ಸೇವೆಗಳು” ಎಂಬ ಘೋಷವಾಕ್ಯದೊಂದಿಗೆ ಜಾಗತಿಕ ಮಟ್ಟದಲ್ಲಿ ಅಭಿಯಾನ ನಡೆಯುತ್ತಿದೆ. ಇದೇ ಹಿನ್ನೆಲೆ ಲಯನ್ಸ್ ಡಿಸ್ಟ್ರಿಕ್ಟ್ 317C – ಲಯನ್ಸ್ ಕ್ಲಬ್ ಮಣಿಪಾಲ್ ಮತ್ತು ಡಾ. ಎ.ವಿ. ಬಾಳಿಗಾ ಸ್ಮಾರಕ ಆಸ್ಪತ್ರೆ, ಉಡುಪಿ ಇವರ ಸಹಯೋಗದಲ್ಲಿ ಅಕ್ಟೋಬರ್ 4ರಿಂದ 12ರವರೆಗೆ ಮಾನಸಿಕ ಆರೋಗ್ಯ ಮತ್ತು ಯೋಗಕ್ಷೇಮ ಸಪ್ತಾಹವನ್ನು ಆಯೋಜಿಸಲಾಗಿದೆ ಖ್ಯಾತ ಮನೋವೈದ್ಯ ಡಾ. ಬಿ ವಿ ಭಂಡಾರಿ ತಿಳಿಸಿದ್ದಾರೆ. 


ಮಾನಸಿಕ ಆರೋಗ್ಯ ಸಮಸ್ಯೆಗಳು ವಿಶ್ವದಾದ್ಯಂತ ಹೆಚ್ಚುತ್ತಿರುವ ಸಂದರ್ಭದಲ್ಲಿ, ಭಾರತದಲ್ಲಿಯೇ ವಯಸ್ಕರ 10% ಕ್ಕಿಂತ ಹೆಚ್ಚು ಮಂದಿ ಖಿನ್ನತೆ, ಆತಂಕ ಮತ್ತು ಇತರ ಅಸ್ವಸ್ಥತೆಗಳನ್ನು ಅನುಭವಿಸುತ್ತಿದ್ದಾರೆ. ಆದಾಗ್ಯೂ, ಮನೋವೈದ್ಯರು ಮತ್ತು ಮನಶ್ಯಾಸ್ತ್ರಜ್ಞರ ಕೊರತೆ, ಹಾಗೂ ಮಾನಸಿಕ ಕಾಯಿಲೆಯ ಕುರಿತು ಸಮಾಜದಲ್ಲಿ ಇರುವ ಕಳಂಕವೇ ಮುಖ್ಯ ಸವಾಲಾಗಿದೆ. 2017ರ ಮಾನಸಿಕ ಆರೋಗ್ಯ ಕಾಯ್ದೆ ಹಾಗೂ ಟೆಲಿ ಮಾನಸ್ ಉಪಕ್ರಮಗಳು ಚಿಕಿತ್ಸೆಯ ಅಂತರವನ್ನು ಕಡಿಮೆ ಮಾಡಲು ಪ್ರಯತ್ನಿಸುತ್ತಿದ್ದರೂ, ಇನ್ನೂ ಗುಣಮಟ್ಟದ ಆರೈಕೆಗೆ ಜನರು ತಲುಪುವಲ್ಲಿ ತೊಂದರೆಗಳಿವೆ.


ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಮಾನಸಿಕ ಆರೋಗ್ಯ ಸಪ್ತಾಹದಲ್ಲಿ ಮಕ್ಕಳು, ಮಹಿಳೆಯರು, ಉದ್ಯೋಗಿಗಳು, ಹಿರಿಯ ನಾಗರೀಕರು ಸೇರಿದಂತೆ ಸಮಾಜದ ಎಲ್ಲಾ ವರ್ಗಗಳನ್ನು ಒಳಗೊಂಡಂತೆ ಜಾಗೃತಿ ಕಾರ್ಯಕ್ರಮಗಳು, ಉಪನ್ಯಾಸಗಳು ಮತ್ತು ಸಮಾಲೋಚನಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ. ಆಯೋಜಕರು, ಮಾನಸಿಕ ಆರೋಗ್ಯದ ಕುರಿತ ಕಳಂಕವನ್ನು ಕಡಿಮೆ ಮಾಡುವುದು, ತುರ್ತು ಪರಿಸ್ಥಿತಿಗಳಲ್ಲಿಯೂ ಸೂಕ್ತ ಸೇವೆಗಳನ್ನು ಒದಗಿಸುವುದು ಮತ್ತು ಆರೋಗ್ಯಕರ ಜೀವನಶೈಲಿಯ ಅರಿವು ಮೂಡಿಸುವುದೇ ಈ ಸಪ್ತಾಹದ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದ್ದಾರೆ.

Ads on article

Advertise in articles 1

advertising articles 2

Advertise under the article