Udupi: ಡಿವೈಡರ್ ಏರಿ ಬಂದು ಬೈಕ್‌ಗೆ ಟಿಪ್ಪರ್ ಡಿಕ್ಕಿ; ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ (Video)
Friday, September 26, 2025
ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ವೊಂದು ಡಿವೈಡರ್ ಏರಿ ಬಂದು ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಗುಂಡಿಬೈಲು ಸಮೀಪ ಗುರುವಾರ ಮಧ್ಯಾಹ್ನ ಸಂಭವಿಸಿದೆ.
ಕಲ್ಸಂಕದಿ0ದ ಗುಂಡಿಬೈಲು ಕಡೆಗೆ ತೆರಳುತ್ತಿದ್ದ ಟಿಪ್ಪರ್ ಏಕಾಏಕಿಯಾಗಿ ಡಿವೈಡರ್ ಏರಿ ಬಂದು ಕಲ್ಸಂಕ ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದಿದೆ. ಟಿಪ್ಪರ್ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ಸವಾರ ಗಣೇಶ್ ಕರ್ಕೇರ ಅವರು ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ತಕ್ಷಣವೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಹಸವಾರ ಗಜೇಂದ್ರ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.