
Udupi: ಸಮೀಕ್ಷೆ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದರೆ ಶಿಸ್ತುಕ್ರಮ
Sunday, September 28, 2025
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದಲ್ಲಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸಲಾಗಿದ್ದು, ಸದರಿ ಸಮೀಕ್ಷೆಗೆ ನಿಯೋಜನೆಗೊಂಡ ಗಣತಿದಾರರು ನಿರ್ಲಕ್ಷ್ಯ ತೋರಿದಲ್ಲಿ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಎಚ್ಚರಿಕೆ ನೀಡಿದ್ದಾರೆ.
ಗಣತಿದಾರರಿಗೆ ತಮಗೆ ನಿಯೋಜಿಸಲಾಗಿರುವ ಸಮೀಕ್ಷಾ ಬ್ಲಾಕ್ ಗಳಲ್ಲಿ ಸಮೀಕ್ಷೆಯನ್ನು ನಿರ್ವಹಿಲು ಆದೇಶಿಸಲಾಗಿರುತ್ತದೆ. ಯಾವುದೇ ಗಣತಿದಾರರು ಸಮೀಕ್ಷೆಯಲ್ಲಿ ನಿಷ್ಕಾಳಜಿ ತೋರುವಂತಿಲ್ಲ. ಗಣತಿದಾರರು ಸಮೀಕ್ಷೆಯಲ್ಲಿ ನಿರಾಸಕ್ತಿ ಅಥವಾ ಅಸಡ್ಡೆ ತೋರಿದ್ದಲ್ಲಿ, ಅನಗತ್ಯ ನೆಪಗಳನ್ನು ಹೇಳಿ ಗಣತಿ ಕಾರ್ಯದಲ್ಲಿ ನಿರ್ಲಕ್ಷ್ಯ ತೋರಿದ್ದಲ್ಲಿ ನಿರ್ದಾಕ್ಷಿಣ್ಯವಾಗಿ ಇಲಾಖಾ ವಿಚಾರಣೆ ನಡೆಸಲು ಹಾಗೂ ಸರ್ಕಾರದ ಕೆಲಸದಲ್ಲಿ ನಿಷ್ಕಾಳಜಿ ತೋರಿದ್ದಕ್ಕೆ ಶಿಸ್ತುಕ್ರಮ ಜರುಗಿಸಲು ಸರ್ಕಾರಕ್ಕೆ ಶಿಫಾರಸ್ಸು ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮೀಕ್ಷೆಯಲ್ಲಿ ಎಲ್ಲರೂ ಭಾಗವಹಿಸುವಂತೆ ಅವರು ವಿನಂತಿಸಿದ್ದಾರೆ.