Udupi: ತಾ.ಪಂ, ಜಿ.ಪಂ ಚುನಾವಣೆ ಹಿನ್ನೆಲೆ; ಸಿದ್ಧತೆಗಳ ಬಗ್ಗೆ ಕೋರ್ ಕಮಿಟಿಯಲ್ಲಿ ತೀರ್ಮಾನ- ಐವನ್ ಡಿಸೋಜಾ
Friday, September 19, 2025
ಮುಂಬರುವ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಚುನಾವಣೆಗೆ ಸಿದ್ಧತೆಗಳನ್ನು ನಡೆಸುವ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದ್ದಾರೆ.
ಉಡುಪಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ ತಿಂಗಳಿನಲ್ಲಿ ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗಳು ನಡೆಯಲಿದ್ದು, ಈಗಾಗಲೇ ಮೀಸಲಾತಿಯನ್ನು ಬಿಡುಗಡೆ ಮಾಡಲಾಗಿದೆ ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಇವಿಎಂ ಬದಲು ಮತ ಪತ್ರ ಬಳಕೆ ಮಾಡುವ ಬಗ್ಗೆ ಕ್ಯಾಬಿನೆಟ್ ಹಾಗೂ ವಿಧಾನಸಭೆಯಲ್ಲೂ ಚರ್ಚೆಯಾಗಿದೆ. ಇವಿಎಂ ಬದಲು ಮತ ಪತ್ರ ಬಳಕೆಗೆ ತೀರ್ಮಾನಿಸಿರುವ ಸರ್ಕಾರದ ಕ್ರಮವನ್ನು ಪಾಲಿಸುವುದಾಗಿ ಈಗಾಗಲೇ ಚುನಾವಣಾ ಆಯೋಗದ ಅಧ್ಯಕ್ಷರು ತಿಳಿಸಿದ್ದಾರೆ. ಹಾಗಾಗಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಯಾವುದೇ ರೀತಿಯಲ್ಲಿ ನಡೆದರೂ ಕಾಂಗ್ರೆಸ್ ಪಕ್ಷ ಚುನಾವಣೆ ಎದುರಿಸಲು ಸಿದ್ಧತೆ ಮಾಡಿಕೊಂಡಿದೆ ಎಂದರು.