-->
Uppinangady:  ಶಿರಾಡಿ ಬಳಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; 16 ಮಂದಿಗೆ ಗಾಯ

Uppinangady: ಶಿರಾಡಿ ಬಳಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ; 16 ಮಂದಿಗೆ ಗಾಯ


ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ನಡೆದ ಅಪಘಾತದಲ್ಲಿ 16 ಮಂದಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬೆಂಗಳೂರು- ಮಂಗಳೂರು ನಡುವಿನ ಶಿರಾಡಿ ಬಳಿ ನಡೆದಿದೆ. 

ಅಪಘಾತದಲ್ಲಿ 16 ಮಂದಿ ಗಾಯಗೊಂಡಿದ್ದು, ಸುಮಾರು 3 ಗಂಟೆ ಕಾಲ ವಾಹನಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಬೆಂಗಳೂರಿನಿ0ದ ಧರ್ಮಸ್ಥಳಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಹಾಗೂ ಮಂಗಳೂರಿನಿAದ ಬೆಂಗಳೂರಿಗೆ ತೆರಳುತ್ತಿದ್ದ ರಾಜಹಂಸ ಬಸ್‌ಗಳ ನಡುವೆ ಶಿರಾಡಿ ಗ್ರಾಮದ ಗುಂಡ್ಯ ಬಳಿ ಢಿಕ್ಕಿಯಾಗಿದೆ. ಸಾರಿಗೆ ಬಸ್‌ನಲ್ಲಿದ್ದ 9 ಗಂಭೀರ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜಹಂಸದಲ್ಲಿದ್ದ 7 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ನೆಲ್ಯಾಡಿ ಹೊರ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ವಾಹನಗಳ ಸಂಚಾರ ಸುಗಮಕ್ಕೆ ಅನುವು ಮಾಡಿಕೊಟ್ಟರು.


 

Ads on article

Advertise in articles 1

advertising articles 2

Advertise under the article