
Uppinangady: ಟಿಪ್ಪರ್ ಮತ್ತು ಕಾರು ನಡುವೆ ಡಿಕ್ಕಿ; ಕಾರು ಚಾಲಕನಿಗೆ ಗಾಯ
Friday, September 26, 2025
ಟಿಪ್ಪರ್ ಹಾಗೂ ಕಾರು ಢಿಕ್ಕಿಯಾಗಿ ಕಾರು ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಲಾಯಿಲ ಗ್ರಾಮದ ಕಾಶಿಬೆಟ್ಟು ಬಳಿ ಸೆ. 26ರಂದು ನಡೆದಿದೆ.
ಉಜಿರೆ ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಬೆಳ್ತಂಗಡಿ ಕಡೆಗೆ ಬರುತ್ತಿದ್ದ ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಅತೀ ವೇಗದ ಚಾಲನೆಯಿಂದಾಗಿ ಅಪಘಾತವಾಗಿದೆ ಎಂದು ತಿಳಿದು ಬಂದಿದೆ.
ಅಪಘಾತದ ತೀವ್ರತೆಗೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದ್ದು, ಗಂಭೀರ ಗಾಯಗೊಂಡ ಚಾಲಕನನ್ನು ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.