
Vitla: ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿಯ ಬಂಧನ; ನ್ಯಾಯಾಂಗ ಬಂಧನ ವಿಧಿಸಿದ ಕೋರ್ಟ್
Saturday, September 27, 2025
ಪ್ರಕರಣವೊಂದರಲ್ಲಿ ಭಾಗಿಯಾಗಿ ಜಾಮೀನು ಪಡೆದ ಬಳಿಕ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಆರೋಪಿಯೊಬ್ಬನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನಿವಾಸಿ ಮಹಮ್ಮದ್ ಇರ್ಷಾದ್ ಕೆ.ಎ(32) ಬಂಧಿತ ಆರೋಪಿ. ವಿಟ್ಲ ಪೊಲೀಸ್ ಠಾಣಾ ಅಕ್ರ 26/ 2018 ಕಲಂ 447, 341, 504, 323, 324, 354, 506 ಆರ್.ಡಬ್ಲೂö್ಯ 34 ಐಪಿಸಿ ಪ್ರಕರಣದ ಆರೋಪಿ ಮಹಮ್ಮದ್ ಇರ್ಷಾದ್ ನ್ಯಾಯಾಲಯಕ್ಕೆ ಹಾಜರಾಗದೇ ತಲೆಮರೆಸಿಕೊಂಡಿದ್ದ. ನ್ಯಾಯಾಲಯವು ಸಿಸಿ 1565 /2023ರಲ್ಲಿ ವಾರಂಟ್ ಹೊರಡಿಸಿತ್ತು. ಇದೀಗ ಆರೋಪಿಯನ್ನು ಬಂಟ್ವಾಳ ತಾಲೂಕಿನ ಅಳಿಕೆ ಎಂಬಲ್ಲಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ನ್ಯಾಯಾಲಯವು ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.