ಧರ್ಮಸ್ಥಳ ಪ್ರಕರಣ; ಅ. 31ರೊಳಗೆ ಎಸ್‌ಐಟಿ ವರದಿ ಸಲ್ಲಿಸಲಿದೆ- ಡಾ. ಪರಮೇಶ್ವರ್
Monday, October 27, 2025
ಧರ್ಮಸ್ಥಳ ಪ್ರಕರಣದ ತನಿಖೆಗೆ ನಡೆಸುತ್ತಿರುವ ಎಸ್‌ಐಟಿ ತಂಡ ಅಂತಿಮ ವರದಿಯನ್ನು ಅಕ್ಟೋಬರ್ ಅಂತ್ಯದೊಳಗೆ ಸಲ್ಲಿಸಲಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಹೇಳಿದರು.
ಅವರು ಬೆಂಗಳೂರಿನ ಸದಾಶಿವನಗರದ ತಮ್ಮ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದರು. ಅಕ್ಟೋಬರ್ ತಿಂಗಳಲ್ಲಿ ವರದಿ ಕೊಡುವುದಾಗಿ ಎಸ್‌ಐಟಿಯವರು ಹೇಳಿದ್ದರು. 31ರೊಳಗೆ ಕೊಡಬಹುದು ಅಥವಾ ಒಂದೆರಡು ದಿನ ವಿಳಂಬವಾಗಬಹುದು. ಅಂತಿಮ ವರದಿಯನ್ನು ಕೊಡುವಂತೆ ಹೇಳಿದ್ದೇವೆ. ಪತ್ತೆಯಾಗಿರುವ ಮೂಳೆಗಳ ಎಫ್‌ಎಸ್‌ಎಲ್ ವರದಿ, ಕೆಮಿಕಲ್ ರಿಪೋರ್ಟ್ಸ್ ವಿಶ್ಲೇಷಣೆ ಮಾಡಿ ವರದಿ ಕೊಡುತ್ತೇವೆ ಎಂದು ಹೇಳಿದ್ದಾರೆ ಎಂದರು.