ಬಿಹಾರ ಚುನಾವಣೆ ಬಳಿಕ 2ನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ- ಸಿಇಸಿ ಜ್ಞಾನೇಶ್ ಕುಮಾರ್
Monday, October 27, 2025
ಬಿಹಾರ ವಿಧಾನ ಸಭಾ ಚುನಾವಣೆಯ ಬಳಿಕ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 2ನೇ ಹಂತದ ಮತದಾರರ ಪಟ್ಟಿ ಪರಿಷ್ಕರಣೆ ನಡೆಯಲಿದೆ ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಹೇಳಿದ್ದಾರೆ.
ದಿಲ್ಲಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಜ್ಞಾನೇಶ್ ಕುಮಾರ್, ಮೊದಲ ಹಂತದಲ್ಲಿ ಬಿಹಾರ ಚುನಾವಣೆಗೆ ಮತದಾರರ ಪಟ್ಟಿಯ ಪರಿಷ್ಕರಣೆ ನಡೆಸಲಾಗಿತ್ತು. ಈ ಪ್ರಕ್ರಿಯೆ ವಿವಾದಕ್ಕೆ ಕಾರಣವಾಯಿತು. ಪ್ರತಿಪಕ್ಷಗಳಿಂದ ಪ್ರತಿಭಟನೆಗಳು ನಡೆದವು. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಸಮಯದ ಬಗ್ಗೆ ಪ್ರಶ್ನೆ ಭುಗಿಲೆದ್ದಿತ್ತು. ಆದರೆ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯನ್ನು ಯಶಸ್ವಿಯಾಗಿ ನಡೆಸಲಾಗಿದೆ ಎಂದು ಹೇಳಿದರು.