
Mangalore: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅ.1 ಮತ್ತು ಅ.2ರಂದು ಮಂಗಳೂರು ಪ್ರವಾಸ
Wednesday, October 01, 2025
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದ.ಕ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅ. 1 ಮತ್ತು 2 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.
ಅ. 1 ರಂದು ಸಂಜೆ 5: 55 ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮನ, (ವಾಸ್ತವ್ಯ) ಅ. 2 ರಂದು ಬೆಳಿಗ್ಗೆ 9 ಗಂಟೆಗೆ ಮಂಗಳೂರಿನಿಂದ ಕಾಸರಗೋಡಿಗೆ ತೆರಳಲಿದ್ದಾರೆ. ಮಧ್ಯಾಹ್ನ ಮಂಗಳೂರಿಗೆ ಆಗಮಿಸುವ ಸಚಿವರು, ಸಂಜೆ 6:15 ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ.