ದ್ವೇಷ ಭಾಷಣ; ಅ. 30ರಂದು ವಿಚಾರಣೆಗೆ ಹಾಜರಾಗಲು ಕಲ್ಲಡ್ಕ ಪ್ರಭಾಕರ್ ಭಟ್‌ಗೆ ನೋಟಿಸ್
Monday, October 27, 2025
ದ್ವೇಷ ಭಾಷಣ ಮಾಡಿದ ಆರೋಪದಲ್ಲಿ ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲಾಗಿದ್ದು, ಅ. 30ರಂದು ಪುತ್ತೂರು ಗ್ರಾಮಾಂತರ ಠಾಣೆಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ಜಾರಿ ಮಾಡಲಾಗಿದೆ.
ಅ. 20ರಂದು ಪುತ್ತೂರಿನಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ದ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ಈಶ್ವರಿ ಪದ್ಮುಂಜ ಎಂಬಾಕೆ ಪುತ್ತೂರು ಗ್ರಾಮಾಂತರ ಠಾಣೆಗೆ ದೂರು ನೀಡಿದ್ದರು. ಅದರಂತೆ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಕಲಂ 35(3) ಭಾರತೀಯ ನಾಗರಿಕ ಸುರಕ್ಷತಾ ಸಂಹಿತೆ 2023 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಈ ಪ್ರಕರಣಕ್ಕೆ ಸಂಬ0ಧಿಸಿ ಅ. 30ರಂದು ವಿಚಾರಣೆಗೆ ಹಾಜರಾಗಲು ನೋಟೀಸ್ ಜಾರಿ ಮಾಡಿದೆ.