ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್‌ಗೆ ಗಾಯ; ಐಸಿಯುನಲ್ಲಿ ಚಿಕಿತ್ಸೆ
Monday, October 27, 2025
ಆಸ್ಟ್ರೇಲಿಯಾ ವಿರುದ್ಧದ ಮೂರನೇ ಪಂದ್ಯದ ವೇಳೆ ಗಾಯಗೊಂಡಿದ್ದ ಟೀಂ ಇಂಡಿಯಾ ಉಪ ನಾಯಕ ಶ್ರೇಯಸ್ ಅಯ್ಯರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಟ್ರೇಲಿಯಾದ ಬ್ಯಾಟ್ಸಮನ್ ಅಲೆಕ್ಸ್ ಕ್ಯಾರಿ ಹೊಡೆದ ಚೆಂಡನ್ನು ಹಿಡಿಯುವ ವೇಳೆ ಬಿದ್ದಾಗ ಶ್ರೇಯಸ್ ಅಯ್ಯರ್ ಅವರ ಎಡ ಪಕ್ಕೆಲುಬಿಗೆ ಗಾಯವಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ದೇಹದ ಒಳಗೆ ರಕ್ತಸ್ರಾವ ಕಂಡು ಬಂದಿದೆ. ಶ್ರೇಯಸ್ ಅಯ್ಯರ್ ಅವರ ಪೆಕ್ಕೆಲುಬಿಗೆ ಗಂಭೀರ ಗಾಯವಾಗಿದ್ದು, ಇದರಿಂದ ಹೊಟ್ಟೆಯ ಮೇಲ್ಭಾಗದ ಅಂಗ ಗುಲ್ಮದಲ್ಲಿ ಆಂತರಿಕ ರಕ್ತಸ್ರಾವವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದೇ ಕಾರಣದಿಂದಾಗಿ ಅವರನ್ನು ಐಸಿಯುನಲ್ಲಿರಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.
ಸದ್ಯ ತೀವ್ರ ನಿಗಾದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶ್ರೇಯಸ್ ಅಯ್ಯರ್ ಇನ್ನೂ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಇರಲಿದ್ದಾರೆ ಎಂದು ತಿಳಿದುಬಂದಿದೆ.
