ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಎಎಸ್ಐ ಪುತ್ರಿ ಸಾವು
Monday, October 27, 2025
ಉಡುಪಿಯ ನಿಟ್ಟೂರು ಕೆಎಸ್‌ಆರ್‌ಟಿಸಿ ಡಿಪ್ಪೋ ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸವಾರೆ ಚಿಕಿತ್ಸೆಗೆ ಸ್ಪಂಧಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಿರ್ವ ಪೊಲೀಸ್ ಠಾಣಾ ಎಎಸ್ಐ ಸುದೇಶ್ ಶೆಟ್ಟಿ ಮಗಳು ಸ್ಪರ್ಷ (24) ಮೃತ ಸವಾರೆ.
ಆಕೆಯ ತಾಯಿ ಶರ್ಮಿಳಾ (49) ಎಂಬವರು ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅ. 26ರಂದು ರಾತ್ರಿ ತಾಯಿಯೊಂದಿಗೆ ಮನೆಯಿಂದ ಉಡುಪಿಗೆ ತೆರಳುತ್ತಿದ್ದ ವೇಳೆ ನಿಟ್ಟೂರು ಬಳಿ ಕಾರೊಂದು ಡಿಕ್ಕಿ ಹೊಡೆದಿದೆ. ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ (ಅ.27) ಚಿಕಿತ್ಸೆ ಫಲಕಾರಿಯಾಗದೆ ಸ್ಪರ್ಷ ಮೃತಪಟ್ಟಿದ್ದಾರೆ. ಉಡುಪಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

