ಕಾಂಗ್ರೆಸ್‌ನಿಂದ ಹಿಂದೂ ನಾಯಕರ ದನಿ ಹತ್ತಿಕ್ಕುವ ಯತ್ನ; ಯಶ್‌ಪಾಲ್ ಸುವರ್ಣ
Monday, October 27, 2025
ಆರ್‌ಎಸ್‌ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಮೇಲೆ ಪ್ರಕರಣ ದಾಖಲಿಸುವ ಮೂಲಕ ಹಿಂದೂ ನಾಯಕರ ದನಿಯನ್ನು ಹತ್ತಿಕ್ಕಲು ಸರ್ಕಾರ ಮುದಾಗುತ್ತಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರ್‌ಎಸ್‌ಎಸ್ ಕಾರ್ಯ ವೈಖರಿಯನ್ನು ಕಂಡು ಹತಾಶಗೊಂಡಿರುವ ಕಾಂಗ್ರೆಸ್ ಸರ್ಕಾರ, ಸಂಘಟನೆ ಹಾಗೂ ಮುಖಂಡರು ಗುರಿಯಾಗಿಸಿ ಪ್ರಕರಣ ದಾಖಲಿಸುವ ಮೂಲಕ ಅಲ್ಪ ಸಂಖ್ಯಾತರ ಓಲೈಕೆಗೆ ಮುಂದಾಗಿದೆ ಎಂದು ಕಿಡಿಕಾರಿದರು.
ಸಿದ್ದರಾಮಯ್ಯ ಸರ್ಕಾರ ತನ್ನ ಹಿಂದೂ ವಿರೋಧಿ ನೀತಿಯಿಂದ ಹಿಂದೂ ಸಂಘಟನೆಯ ಮುಖಂಡರು ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ನಿರಂತರವಾಗಿ ಮಾಡುತ್ತಿದ್ದು, ಲಕ್ಷಾಂತರ ಹಿಂದೂ ಕಾರ್ಯಕರ್ತರ ಮಾರ್ಗದರ್ಶಕರಾಗಿರುವ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಹಾಕಿರುವ ಸುಳ್ಳು ಕೇಸುಗಳನ್ನು ತಕ್ಷಣ ಹಿಂಪಡೆಯಬೇಕು, ತಪ್ಪಿದಲ್ಲಿ ಮುಂದಾಗುವ ಅನಾಹುತಕ್ಕೆ ರಾಜ್ಯ ಸರಕಾರವೇ ನೇರ ಹೊಣೆಯಾಗಲಿದೆ ಎಂದು ಯಶ್ ಪಾಲ್ ಸುವರ್ಣ ಎಚ್ಚರಿಕೆ ನೀಡಿದ್ದಾರೆ.