-->
ದ್ವಿಚಕ್ರ ವಾಹನ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು

ದ್ವಿಚಕ್ರ ವಾಹನ ಡಿಕ್ಕಿ; ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತ್ಯು


ದ್ವಿಚಕ್ರ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಮಹಿಳೆ ಮೃತಪಟ್ಟ ಘಟನೆ ಬ್ರಹ್ಮಾವರದ ಚೇರ್ಕಾಡಿಯಲ್ಲಿ ನಡೆದಿದೆ. 

ರತಿ ದೇವಿ(40) ಮೃತ ಮಹಿಳೆ. ಬ್ರಹ್ಮಾವರದ ಚೇರ್ಕಾಡಿ ಗ್ರಾಮದ ಕನ್ನಾರು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಸಾಗುವ ರಸ್ತೆಯ ಬ್ರಹ್ಮಾವರ ಹೆಬ್ರಿ ರಸ್ತೆಯಲ್ಲಿ ಸಾಗುತ್ತಿದ್ದ ವೇಳೆ ಲಕ್ಷö್ಮಣ ನಾಯ್ಕ ಚಲಾಯಿಸುತ್ತಿದ್ದ ಬೈಕ್ ಡಿಕ್ಕಿಯಾಗಿದೆ. ಗಂಭೀರ ಗಾಯಗೊಂಡ ರತಿ ದೇವಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. 

ಈ ಬಗ್ಗೆ ಬ್ರಹ್ಮಾವರ ಠಾಣೆಯಲ್ಲಿ ದೂರು ದಾಖಲಾಗಿದೆ. 


Ads on article

Advertise in articles 1

advertising articles 2

Advertise under the article