ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಸವಾರ ಸಾವು, ಓರ್ವ ಗಂಭೀರ
Monday, November 03, 2025
ದ್ವಿಚಕ್ರ ವಾಹನಗಳ ನಡುವೆ ಅಪಘಾತ ಸಂಭವಿಸಿ ಸವಾರರೊಬ್ಬರು ಮೃತಪಟ್ಟ ಘಟನೆ ಕಾಸರಗೋಡು ಜಿಲ್ಲೆಯ ಮಂಜೇಶ್ವರ ಸಮೀಪ ನಡೆದಿದೆ.
ಪೈವಳಿಕೆ ಕಳಾಯಿ ನಿವಾಸಿ ಗೋಪಾಲಕೃಷ್ಣ ನಲ್ಲೂರಾಯ(66) ಮೃತಪಟ್ಟವರು. ಸಹ ಸವಾರ ಶಿವಶಂಕರ್ ಭಟ್ ಅವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೂಜಾ ಕಾರ್ಯದ ನಿಮಿತ್ತ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ ಎದುರಗಡೆಯಿಂದ ಬಂದ ಇನ್ನೊಂದು ದ್ವಿಚಕ್ರ ವಾಹನ ಡಿಕ್ಕಿಯಾಗಿದೆ.
ಘಟನೆಯಲ್ಲಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡ ಗೋಪಾಲಕೃಷ್ಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಅವರು ಮೃತಪಟ್ಟಿದ್ದಾರೆ. ಮಂಜೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.