ವಿಶ್ವಕಪ್ ವಿಜೇತ ಮಹಿಳಾ ಕ್ರಿಕೆಟ್ ತಂಡಕ್ಕೆ 51 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ
Monday, November 03, 2025
2025ರ ಐಸಿಸಿ ಮಹಿಳಾ ಕ್ರಿಕೆಟ್ ವಿಶ್ವಕಪ್ ಗೆದ್ದ ಟೀಂ ಇಂಡಿಯಾ ತಂಡಕ್ಕೆ ಬಿಸಿಸಿಐ 51 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.
ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಅವರು ಘೋಷಿಸಿದ್ದಾರೆ. ಭಾನುವಾರ ರಾತ್ರಿ ನಡೆದ ವಿಶ್ವಕಪ್ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾವನ್ನು 52 ರನ್‌ಗಳಿಂದ ಮಣಿಸಿ ಟೀಂ ಇಂಡಿಯಾ ವಿಶ್ವಕಪ್ ಮುಡಿಗೇರಿಸಿಕೊಂಡಿಉ. ವಿಶ್ವಕಪ್ ವಿಜೇತ ತಂಡಕ್ಕೆ ಐಸಿಸಿ 4.48 ಮಿಲಿಯನ್ ಯುಎಸ್ ಡಾಲರ್ ಬಹುಮಾನ ನಿಗದಿಪಡಿಸಿತ್ತು. ಇದೀಗ ಬಿಸಿಸಿಐ 51 ಕೋಟಿ ರೂಪಾಯಿ ಬಹುಮಾನ ಘೋಷಿಸಿದೆ.