ಆ್ಯಂಬುಲೆನ್ಸ್ ಡಿಕ್ಕಿಯಾಗಿ ದಂಪತಿಗಳ ಸಾವು
Sunday, November 02, 2025
ಆ್ಯಂಬುಲೆನ್ಸ್ ಡಿಕ್ಕಿ ಹೊಡೆದು ಬೈಕಿನಲ್ಲಿದ್ದ ದಂಪತಿಗಳು ದಾರುಣವಾಗಿ ಮೃತಪಟ್ಟು, ಮತ್ತಿಬ್ಬರು ಗಾಯಗೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಮೃತಪಟ್ಟ ದಂಪತಿಗಳನ್ನು ಇಸ್ಮಾಯಿಲ್ (40) ಮತ್ತು ಸಮೀನ್ ಬಾನು (36) ಎಂದು ಗುರುತಿಸಲಾಗಿದೆ.
ರಿಚ್ಮಂಡ್ ಸರ್ಕಲ್ ಕಡೆಯಿಂದ ಅತಿವೇಗದಲ್ಲಿ ಬಂದ ಆ್ಯಂಬುಲೆನ್ಸ್ ಸಿಗ್ನಲ್ ಬಳಿ ಮೂರು ಬೈಕ್ಗಳಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಬೈಕಿನಲ್ಲಿದ್ದವರು ಸಾವನ್ನಪ್ಪಿದ್ದಾರೆ.
ರೆಡ್ ಸಿಗ್ನಲ್ ಇದ್ದ ಕಾರಣ ಬೈಕ್ ನಿಲ್ಲಿಸಿದ್ದ ಸವಾರರಿಗೆ ಹಿಂಬದಿಯಿಂದ ವೇಗವಾಗಿ ಬಂದು ಆ್ಯಂಬುಲೆನ್ಸ್ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ. ಆ್ಯಂಬುಲೆನ್ಸ್ ಚಾಲಕನ ನಿರ್ಲಕ್ಷತನಕ್ಕೆ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದು, ಆ್ಯಂಬುಲೆನ್ಸನ್ನು ಎತ್ತಿ ಪಲ್ಟಿ ಮಾಡಿದ್ದಾರೆ.