ಬಾಂಗ್ಲಾ ಪದಚ್ಯುತ ಪ್ರಧಾನಿ ಶೇಖ್ ಹಸೀನಾಗೆ ಮರಣದಂಡನೆ
Monday, November 17, 2025
ಬಾಂಗ್ಲಾದೇಶದ ಪದಚ್ಯುತ ಪ್ರಧಾನಿ ಶೇಖ್ ಹಸೀನಾ ಅವರಿಗೆ ಅಂತರರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ)ಮರಣದಂಡನೆ ವಿಧಿಸಿದೆ.
ಬಾಂಗ್ಲಾದೇಶದಲ್ಲಿ ಕಳೆದ ವರ್ಷದ ವಿದ್ಯಾರ್ಥಿ ದಂಗೆ ವೇಳೆ ಮಾನವೀಯತೆಯ ವಿರುದ್ಧದ ಅಪರಾಧಗಳನ್ನು ಎಸಗಿದ ಆರೋಪದಲ್ಲಿ ಶಿಕ್ಷೆ ವಿಧಿಸಲಾಗಿದೆ.
2024ರ ಜುಲೈನಲ್ಲಿ ವಿದ್ಯಾರ್ಥಿಗಳ ನೇತೃತ್ವದಲ್ಲಿ ನಡೆದ ಸರ್ಕಾರ ವಿರೋಧಿ ಪ್ರತಿಭಟನೆಗಳನ್ನು ಹತ್ತಿಕ್ಕಲು ಹಸೀನಾ ಸರ್ಕಾರವು ಭದ್ರತಾ ಪಡೆಗಳಿಗೆ ಅತಿಯಾದ ಬಲಪ್ರಯೋಗಕ್ಕೆ ಅನುಮತಿ ನೀಡಿರುವುದು ದಾಖಲಾಗಿದೆ. ಈ ಕ್ರಮದಲ್ಲಿ ಅನೇಕ ವಿದ್ಯಾರ್ಥಿಗಳು ಮತ್ತು ನಾಗರಿಕರು ಪ್ರಾಣ ಕಳೆದುಕೊಂಡಿದ್ದರು.
ಪ್ರತಿಭಟನೆಗಳ ದಮನದ ಕ್ರಮ ದೇಶದಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ದಂಗೆಯ ಸಂಬ0ಧಿಸಿದ ಪ್ರಕರಣಗಳ ತನಿಖೆಯನ್ನು ಕೈಗೊಂಡಿದ್ದ ಐಸಿಟಿ ಹಲವು ತಿಂಗಳ ವಿಚಾರಣೆಯ ನಂತರ ಇಂದು ಅಂತಿಮ ತೀರ್ಪು ಪ್ರಕಟಿಸಿದೆ.