ಚೆನ್ನಮ್ಮ ಮೃಗಾಲಯದಲ್ಲಿ ಕೃಷ್ಣಮೃಗಗಳ ಸರಣಿ ಸಾವು
Monday, November 17, 2025
ಬೆಳಗಾವಿಯ ಭೂತರಾಮನಹಟ್ಟಿಯ ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣಮೃಗವೊಂದು ಮೃತಪಟ್ಟಿದ್ದು, ಈವರೆಗೆ ಸಾವಿನ ಸಂಖ್ಯೆ 31ಕ್ಕೆ ಏರಿಕೆಯಾಗಿದೆ.
ಸ್ಥಳಕ್ಕೆ ವೈದ್ಯರ ತಂಡ ಭೇಟಿ ನೀಡಿದ್ದು, ಪ್ರಾಥಮಿಕ ವರದಿ ಪ್ರಕಾರ ಫಾಸ್ಚುರೆಲ್ಲಾ ಮಲ್ಟೋಸಿಡಾ(ಗಳಲೆ ರೋಗ) ಎಂಬ ಬ್ಯಾಕ್ಟೀರಿಯಾ ಸೋಂಕು ತಗುಲಿದ್ದರಿಂದ ಮೃತಪಟ್ಟಿದೆ ಎಂದು ಹೇಳಲಾಗುತ್ತಿದೆ. ನ. 13ರಿಂದ ಈವರೆಗೆ ಒಟ್ಟು 31 ಕೃಷ್ಣ ಮೃಗಗಳು ಸಾವನ್ನಪ್ಪಿವೆ ಎಂದು ತಿಳಿದು ಬಂದಿದೆ.