-->
ಮಲ್ಪೆ ಠಾಣಾ ಎಎಸ್ಐ ಹೃದಯಾಘಾತದಿಂದ ನಿಧನ

ಮಲ್ಪೆ ಠಾಣಾ ಎಎಸ್ಐ ಹೃದಯಾಘಾತದಿಂದ ನಿಧನ


ಉಡುಪಿಯ ಮಲ್ಪೆ ಠಾಣಾ ಎಎಸ್ಐ ವಿಶ್ವನಾಥ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. 

ನವೆಂಬರ್ 1ರಂದು ರಾತ್ರಿ ಮಲ್ಪೆಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ವೇಳೆ ಆರೋಗ್ಯದಲ್ಲಿ ಏರುಪೇರಾಗಿದೆ. ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದು,  ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅದಾಗಲೇ ಹೃದಯಾಘಾತದಿಂದ ವಿಶ್ವನಾಥ್ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಉಡುಪಿ ಜಿಲ್ಲೆಯ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ವಿಶ್ವನಾಥ್ ಅವರು ಜನಸಾಮಾನ್ಯರಿಗೆ ಹತ್ತಿರವಾಗಿದ್ದರು. ಇತ್ತೀಚೆಗಷ್ಟೇ ಮಲ್ಪೆ ಠಾಣೆಗೆ ವರ್ಗಾವಣೆಗೊಂಡಿದ್ದರು. ಅವರ ಅಕಾಲಿಕ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತವಾಗಿದೆ.



Ads on article

Advertise in articles 1

advertising articles 2

Advertise under the article