-->
 ಡಿ. 13ರಂದು ಉಡುಪಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ

ಡಿ. 13ರಂದು ಉಡುಪಿಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ


ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ  500 ವಿದ್ಯಾರ್ಥಿ ಕಲಾವಿದರಿಂದ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮವು ಡಿ. 13ರಂದು ಸಂಜೆ 5.45ಕ್ಕೆ ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣದ ಸಮೀಪ ವಾಹನ ನಿಲುಗಡೆ ಆವರಣದಲ್ಲಿ ನಡೆಯಲಿದೆ ಎಂದು ಅಧ್ಯಕ್ಷ ಡಾ. ಎಂ. ಮೋಹನ್ ಆಳ್ವ ತಿಳಿಸಿದ್ದಾರೆ. 


ಉಡುಪಿಯ ಕಿದಿಯೂರು ಹೊಟೇಲ್ ಸಭಾಂಗಣದಲ್ಲಿ ಅವರು ಆಳ್ವಾಸ್ ಸಾಂಸ್ಕೃತಿಕ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ಆಳ್ವಾಸ್ ಸಂಸ್ಥೆಯಲ್ಲಿ ದತ್ತು ಸ್ವೀಕರಿಸಿದ 3,000 ಮಕ್ಕಳ ಪೈಕಿ 500 ಮಕ್ಕಳಿಗೆ ದೇಶದ ವಿವಿಧ ಕಲೆಗಳ ಬಗ್ಗೆ ತರಬೇತಿ ನೀಡಿ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ ಎಂದರು. 

ಪೇಜಾವರ ವಿಶ್ವೇಶ ತೀರ್ಥ ಹೆಸರಿನ ವೇದಿಕೆಯಲ್ಲಿ ಆಳ್ವಾಸ್ ಸಾಂಸ್ಕೃತಿಕ ವೈಭವ ನಡೆಯಲಿದೆ. ಈ ಕಾರ್ಯಕ್ರಮವನ್ನು ದಿವಂಗತ ಡಾ. ವಿ.ಎಸ್ ಆಚಾರ್ಯ ಅವರಿಗೆ ಅರ್ಪಿಸಲಾಗುವುದು. ಉಡುಪಿ ಕೃಷ್ಣ ಮಠ, ಪರ್ಯಾಯ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಹಾಗೂ ಸುಶ್ರೀಂದ್ರ ತೀರ್ಥ ಶ್ರೀಪಾದರ ಆಶೀರ್ವಾದದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದರು. 

ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ, ಸಂಘಟಕ ದಾಮೋದರ್ ಶರ್ಮ, ವೈದ್ಯ ಡಾ. ಕಿರಣ್ ಆಚಾರ್ಯ, ಯಕ್ಷಗಾನ ಕಲಾರಂಗ ಅಧ್ಯಕ್ಷ ಗಂಗಾಧರ ರಾವ್, ನಗರಸಭೆ ಮಾಜಿ ಅಧ್ಯಕ್ಷ ಪ್ರಭಾಕರ ಪೂಜಾರಿ ಮೊದಲಾದವರು ಇದ್ದರು. ಬಡಗುಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಸ್ವಾಗತಿಸಿದರು. 


 

Ads on article

Advertise in articles 1

advertising articles 2

Advertise under the article